HomeKarnatakaಸಹಾಯಕ ಪ್ರಾಧ್ಯಾಪಕರ ನೇಮಕಾತಿ : ಅಭ್ಯರ್ಥಿಗಳ ಆಯ್ಕೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ

ಸಹಾಯಕ ಪ್ರಾಧ್ಯಾಪಕರ ನೇಮಕಾತಿ : ಅಭ್ಯರ್ಥಿಗಳ ಆಯ್ಕೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು : ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ತ್ವರಿತವಾಗಿ ನೇಮಕಾತಿ ಆದೇಶ ನೀಡಲು ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಸೂಚನೆ ನೀಡಿದ್ದಾರೆ.

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಕೆಇಎ ಸರ್ಕಾರಕ್ಕೆ ಸಲ್ಲಿಸಿದೆ. ನಿಯಮಾನುಸಾರ ನೇಮಕಾತಿ ಆದೇಶ ಹೊರಡಿಸುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌ ಅವರು ಸಲಹೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೇಮಕಾತಿಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿವೆ. ಬೇರೆ ಯಾವ ಪ್ರಕರಣಗಳೂ ಬಾಕಿ ಉಳಿದಿಲ್ಲ. ಹಾಗಾಗಿ ನಿಯಮಾನುಸಾರ ನೇಮಕಾತಿ ಆದೇಶ ಹೊರಡಿಸುವಂತೆ ಸಲಹೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular