ನ್ಯೂಯಾರ್ಕ್ ವಿಶ್ವಸಂಸ್ಥೆ ಕಚೇರಿ ಆವರಣದಲ್ಲಿ ಯೋಗ ದಿನಾಚರಣೆಯಲ್ಲಿ ಮೋದಿ

ನ್ಯೂಯಾರ್ಕ್: ಇಡೀ ಮಾನವೀಯತೆಯ ಸಭೆಯ ಸ್ಥಳದಲ್ಲಿ ನಾವು ಇಲ್ಲಿ ಒಟ್ಟುಗೂಡಿದ್ದೇವೆ. ನಿಮ್ಮೆಲ್ಲರನ್ನೂ ನೋಡಲು ನನಗೆ ಸಂತೋಷವಾಗಿದೆ ಮತ್ತು ಯೋಗ ದಿನಾಚರಣೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ವಿಶ್ವಸಂಸ್ಥೆ ಆವರಣದಲ್ಲಿ ನಡೆದ 9ನೇ ಅಂತರರಾಷ್ಟ್ರೀಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಇಲ್ಲಿ ಬಹುತೇಕ ಎಲ್ಲಾ ರಾಷ್ಟ್ರೀಯತೆಗಳನ್ನು ಪ್ರತಿನಿಧಿಸಲಾಗಿದೆ ಎಂದು ನನಗೆ ಹೇಳಲಾಗಿದೆ. ಯೋಗ ಎಂದರೆ ಒಂದಾಗುವುದು, ಆದ್ದರಿಂದ ನೀವು ಒಟ್ಟಿಗೆ ಸೇರುತ್ತಿರುವುದು ಯೋಗದ ಇನ್ನೊಂದು ರೂಪದ ಅಭಿವ್ಯಕ್ತಿಯಾಗಿದೆ ಎಂದು ಹೇಳಿದ್ದಾರೆ.

ಯೋಗ ಭಾರತದ ಕೊಡುಗೆಯಾಗಿದೆ. ಇದು ಬಹಳ ಹಳೆಯ ಸಂಪ್ರದಾಯವಾಗಿದೆ. ಯೋಗವು ಹಕ್ಕುಸ್ವಾಮ್ಯಗಳು, ಪೇಟೆಂಟ್‌ಗಳಿಂದ ಮುಕ್ತವಾಗಿದೆ. ರಾಯಧನ ಪಾವತಿಗಳಿಂದ ಮುಕ್ತವಾಗಿದೆ. ಯೋಗವು ನಿಮ್ಮ ವಯಸ್ಸು, ಲಿಂಗ ಮತ್ತು ಫಿಟ್‌ನೆಸ್ ಮಟ್ಟಕ್ಕೆ ಹೊಂದಿಕೊಳ್ಳುತ್ತದೆ ಎಂದರು.’

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರತಿನಿಧಿಗಳೊಂದಿಗೆ ಪ್ರಧಾನಿ ಮೋದಿ ಯೋಗ ಮಾಡಿದ್ದಾರೆ. ನ್ಯೂಯಾರ್ಕ್ ನಗರದ ಮೇಯರ್ ಎರಿಕ್ ಆಡಮ್ಸ್ ಮೊದಲಾದವರು ಇದ್ದರು. 180 ದೇಶಗಳ ಗಣ್ಯರು ಭಾಗವಹಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read