HomeKarnatakaಎಟಿಎಂಗೆ ನುಗ್ಗಿದ ವ್ಯಕ್ತಿ: ಸೈರನ್ ಒಡೆದು ದಾಂಧಲೆ

ಎಟಿಎಂಗೆ ನುಗ್ಗಿದ ವ್ಯಕ್ತಿ: ಸೈರನ್ ಒಡೆದು ದಾಂಧಲೆ

ಕಾರವಾರ: ಎಟಿಎಂ ಗೆ ನುಗ್ಗಿದ ವ್ಯಕ್ತಿಯೋರ್ವ ದಾಂಧಲೆ ನಡೆಸಿದ್ದು, ಸೈರನ್ ಒಡೆದು ಗಲಾಟೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ.

ಇಂಡಿಯನ್ ಬ್ಯಾಂಕ್ ಎಟಿಎಂಗೆ ನುಗ್ಗಿದ ವ್ಯಕ್ತಿಯೊಬ್ಬ ಎಟಿಎಂ ಸೈರನ್ ಒಡೆದು ಹಾಕಿದ್ದಾನೆ. ಈ ವೇಳೆ ಬಾಗಿಲು ಏಕಾಏಕಿ ಲಾಕ್ ಆಗಿದೆ. ಸಮೀಪದಲ್ಲಿಯೇ ಇದ್ದ ಎಸ್ ಬಿಐ ಎಟಿಎಂ ಸೆಕ್ಯೂರಿಟಿ ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಎಟಿಎಂ ಬಾಗಿಲು ತೆರೆದು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಹಾಸನ ಮೂಲದ ವ್ಯಕ್ತಿಯಾಗಿದ್ದು, ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಟಿಎಂ ಯಂತ್ರಕ್ಕೆ ಯಾವುದೇ ಹಾನಿಯಾಗಿಲ್ಲ, ಹಣ ಕಳ್ಳತನ ಕೂಡ ನಡೆದಿಲ್ಲ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular