HomeKarnatakaBIG NEWS : ನಟ ಉಪೇಂದ್ರ ವಿರುದ್ಧ 'ಅಟ್ರಾಸಿಟಿ ಕೇಸ್' ದಾಖಲು : ‘ರಿಯಲ್ ಸ್ಟಾರ್’...

BIG NEWS : ನಟ ಉಪೇಂದ್ರ ವಿರುದ್ಧ ‘ಅಟ್ರಾಸಿಟಿ ಕೇಸ್’ ದಾಖಲು : ‘ರಿಯಲ್ ಸ್ಟಾರ್’ ಬಂಧನಕ್ಕೆ ಆಗ್ರಹ

ಬೆಂಗಳೂರು: ಪರಿಶಿಷ್ಟರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ನಟ ರಿಯಲ್ ಸ್ಟಾರ್ ಉಪೇಂದ್ರ ಅವರ ವಿರುದ್ಧ ಅಟ್ರಾಸಿಟಿ ಕೇಸು ದಾಖಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂಧನ್ ಅವರು ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ.ಉಪೇಂದ್ರ ನೀಡಿದ ಹೇಳಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಅವರ ವಿರುದ್ಧ ಪ್ರತಿಭಟನೆ ಕೂಡ ನಡೆಸಲಾಗಿದೆ. ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ದೂರು ಕೂಡ ದಾಖಲಿಸಿವೆ. ಉಪೇಂದ್ರ ಅವರನ್ನು ಬಂಧಿಸಬೇಕೆಂಬ ಒತ್ತಾಯ ಕೂಡ ಕೇಳಿ ಬಂದಿದೆ.

ಉಪೇಂದ್ರ ತಾವು ನೀಡಿದ ಹೇಳಿಕೆಗಾಗಿ ಕ್ಷಮೆ ಕೇಳಿ ವಿಡಿಯೋ ಡಿಲಿಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಉಪೇಂದ್ರ ಪರ ಮತ್ತು ವಿರೋಧವಾಗಿ ಅಭಿಪ್ರಾಯಗಳು ಕೇಳಿ ಬಂದಿವೆ. ಸೆಲೆಬ್ರಿಟಿಯಾಗಿರುವ ನಟ ಉಪೇಂದ್ರ ರಾಜಕೀಯ ಪಕ್ಷದ ಮುಖ್ಯಸ್ಥರೂ ಆಗಿದ್ದಾರೆ. ಅವರು ನೀಡಿದ ಹೇಳಿಕೆ ಆಕ್ಷೇಪಾರ್ಹವಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೆಲವರು ಒತ್ತಾಯಿಸಿದ್ದು, ಅವರು ಈಗಾಗಲೇ ವಿಡಿಯೋ ಡಿಲಿಟ್ ಮಾಡಿ ಕ್ಷಮೆ ಕೇಳಿರುವುದರಿಂದ ಇದನ್ನು ಇಲ್ಲಿಗೆ ನಿಲ್ಲಿಸುವುದು ಒಳಿತು ಎಂದು ಮತ್ತೆ ಕೆಲವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಅವರು, ಫೇಸ್ಬುಕ್ ನಲ್ಲಿ ಉಪೇಂದ್ರ ಅವರು ಹೇಳಿಕೆ ನೀಡಿದ್ದು, ಕೆಲ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪ ಮಾಡಲಾಗಿದೆ. ಉಪೇಂದ್ರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಕಾನೂನಿನಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.ಇವೆಲ್ಲಾ ಬೆಳವಣಿಗೆಗಳ ನಡುವೆ ಅಟ್ರಾಸಿಟಿ ಕೇಸ್ ದಾಖಲಾಗಿರುವುದರಿಂದ ಉಪೇಂದ್ರ ಅವರನ್ನು ಬಂಧಿಸುತ್ತಾರಾ ಎಂದೆಲ್ಲಾ ಚರ್ಚೆಗಳು ನಡೆದಿವೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular