HomeKarnatakaದನ ಸಾಗಿಸುತ್ತಿದ್ದವರ ಮೇಲೆ ಮಾರಣಾಂತಿಕ ಹಲ್ಲೆ: 25 ಮಂದಿ ವಿರುದ್ಧ ಕೇಸ್ ದಾಖಲು

ದನ ಸಾಗಿಸುತ್ತಿದ್ದವರ ಮೇಲೆ ಮಾರಣಾಂತಿಕ ಹಲ್ಲೆ: 25 ಮಂದಿ ವಿರುದ್ಧ ಕೇಸ್ ದಾಖಲು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದನಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದವರ ಮೇಲೆ ಹಲ್ಲೆ ನಡೆಸಿದ 25ಕ್ಕೂ ಹೆಚ್ಚು ಜನರ ವಿರುದ್ಧ ಕೇಸು ದಾಖಲಿಸಲಾಗಿದೆ.

ಗುಂಪೊಂದು ಅನೈತಿಕ ಪೊಲೀಸ್ ಗಿರಿ ನಡೆಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದೆ ಎಂದು ಆರೋಪಿಸಿ ಉದಯಕುಮಾರ್ ದೂರು ನೀಡಿದ್ದಾರೆ. ಕೋಮನೆ ಗ್ರಾಮದ ಶೇಷಪ್ಪ ಗೌಡ ಅವರಿಂದ ಎಂಟು ದನಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುವಾಗ ಕುರುವಳ್ಳಿಯಲ್ಲಿ ಗುಂಪೊಂದು ಅವಾಚ್ಯ ಪದಗಳಿಂದ ಬೈದು ಮಾರಣಾಂತಿಕವಾಗಿ ಹಲ್ಲೆ ಮಾಡಿದೆ.

ಉದಯಕುಮಾರ್ ಜೊತೆಗಿದ್ದ ರಾಹಿದ್ ಮೇಲೆಯೂ ಹಲ್ಲೆ ಮಾಡಲಾಗಿದ್ದು, ಅವರಿಗೆ ತೀವ್ರ ಪೆಟ್ಟಾಗಿ ಪ್ರಜ್ಞೆ ಕಳೆದುಕೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಜೆಸಿ ಆಸ್ಪತ್ರೆಗೆ ದಾಖಲಾಗಿದ್ದೆವು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular