HomeLatest Newsಆಸ್ಪತ್ರೆಗೆ ಕರೆ ತಂದಿದ್ದ ಯುವತಿ ಸಾವನ್ನು ಖಚಿತಪಡಿಸಿದ ವೈದ್ಯರ ಮೇಲೆ ಹಲ್ಲೆ: ಆಸ್ಪತ್ರೆಗೆ ಹಾನಿ, ಔಷಧ...

ಆಸ್ಪತ್ರೆಗೆ ಕರೆ ತಂದಿದ್ದ ಯುವತಿ ಸಾವನ್ನು ಖಚಿತಪಡಿಸಿದ ವೈದ್ಯರ ಮೇಲೆ ಹಲ್ಲೆ: ಆಸ್ಪತ್ರೆಗೆ ಹಾನಿ, ಔಷಧ ನಾಶ

ಮಂಡ್ಯ: ಅನಾರೋಗ್ಯದಿಂದಾಗಿ ಅಸ್ವಸ್ಥಗೊಂಡಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಪರಿಶೀಲನೆ ನಡೆಸಿದ ವೈದ್ಯರು ಯುವತಿ ಮೃತಪಟ್ಟಿರುವುದನ್ನು ಖಚಿತಪಡಿಸುತ್ತಿದ್ದಂತೆ ಆಕೆಯ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೇ, ಆಸ್ಪತ್ರೆಯ ಬಾಗಿಲು, ಗ್ಲಾಸ್ ಒಡೆದು ಹಾಕಿ ಔಷಧಗಳನ್ನು ನಾಶಪಡಿಸಿದ್ದಾರೆ.

ಮಳವಳ್ಳಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶಿಫಾ ಮೃತಪಟ್ಟವರು. ಹಲಗೂರಿನ ತನ್ನ ಅಜ್ಜಿಯ ಮನೆಗೆ ಬಂದಿದ್ದ ಶಿಫಾಗೆ ಅನಾರೋಗ್ಯದಿಂದ ಅಸ್ವಸ್ಥರಾಗಿದ್ದು, ಹಲಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ನಂತರ ತೀವ್ರ ಅಸ್ವಸ್ಥಳಾಗಿದ್ದ ಶಿಫಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಳವಳ್ಳಿ ತಾಲೂಕು ಆಸ್ಪತ್ರೆಗೆ ಕರೆತರಲಾಗಿದೆ. ಈ ವೇಳೆ ಕರ್ತವ್ಯದಲ್ಲಿದ್ದ ಡಾ. ಮುರಳಿ ಪರಿಶೀಲಿಸಿ ಶಿಫಾ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಇದರಿಂದ ಉದ್ವೇಗಗೊಂಡ ಯುವಕರು ತುರ್ತು ಚಿಕಿತ್ಸಾ ಕೊಠಡಿಯ ಬಾಗಿಲು ಗಾಜುಗಳನ್ನು ಒಡೆದು ಹಾಕಿ ಔಷಧಗಳನ್ನು ನಾಶ ಮಾಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಆಸ್ಪತ್ರೆಯ ಆಡಳಿತ ಅಧಿಕಾರಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular