HomeKarnatakaವಿದ್ಯಾರ್ಥಿಯ ಮೇಲೆ ಮನಬಂದಂತೆ ಥಳಿಸಿದ ಗುಂಪು: ಐವರು ಅರೆಸ್ಟ್

ವಿದ್ಯಾರ್ಥಿಯ ಮೇಲೆ ಮನಬಂದಂತೆ ಥಳಿಸಿದ ಗುಂಪು: ಐವರು ಅರೆಸ್ಟ್

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯನ್ನು, ಯುವಕರ ಗುಂಪೊಂದು ಮನಬಂದಂತೆ ಥಳಿಸಿ, ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ಯುವತಿಯೊಂದಿಗೆ ಮಾತನಾಡಿದ್ದಾನೆ ಎಂದು ಆರೋಪಿ ಶಾಲೆಯ ಬಳಿಯೇ ವಿದ್ಯಾರ್ಥಿಯನ್ನು ಹಿಡಿದು ಯುವಕರ ಗುಂಪೊಂದು ಮನ ಬಂದಂತೆ ಥಳಿಸಿತ್ತು. ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದರು. ಇದನ್ನು ಕಂಡ ಇತರ ವಿದ್ಯಾರ್ಥಿಗಳು ಶಾಲೆಯ ಪ್ರಾಂಶುಪಾಲರಿಗೆ ದೂರು ನೀಡಿದ್ದರು.

ಪ್ರಾಂಶುಪಾಲರು ಅಶೋಕ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಬಂಧಿತರು ವಿವಿಧ ಕಾಲೇಜು ವಿದ್ಯಾರ್ಥಿಗಳು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಪೊಲೀಸರು, ಶಾಲಾ-ಕಾಲೇಜು ವಿದ್ಯಾರ್ಥಿಗಳ ಮೇಲೆ ಪ್ರಾಂಶುಪಾಲರು ಹಾಗೂ ಪೋಷಕರು ನಿಗಾವಹಿಸಬೇಕು ಎಂದು ಸೂಚಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular