HomeLatest NewsBREAKING : ಧರ್ಮಸ್ಥಳದಲ್ಲಿ 'ಯೂಟ್ಯೂಬರ್' ಗಳ ಮೇಲೆ ಹಲ್ಲೆ ಕೇಸ್ : 'CM ಸಿದ್ದರಾಮಯ್ಯ' ಫಸ್ಟ್...

BREAKING : ಧರ್ಮಸ್ಥಳದಲ್ಲಿ ‘ಯೂಟ್ಯೂಬರ್’ ಗಳ ಮೇಲೆ ಹಲ್ಲೆ ಕೇಸ್ : ‘CM ಸಿದ್ದರಾಮಯ್ಯ’ ಫಸ್ಟ್ ರಿಯಾಕ್ಷನ್.!

ಧರ್ಮಸ್ಥಳ : ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ‘’ಕಾನೂನು ಎಲ್ಲರಿಗೂ ಒಂದೇ, ಯಾರೇ ತಪ್ಪು ಮಾಡಿದರೂ ಶಿಕ್ಷೆ ವಿಧಿಸಲಾಗುತ್ತದೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಾಳೆ ಪ್ರತಿಭಟನೆ ನಡೆಸಲು ನಾವು ಸಿದ್ದರಿದ್ದೇವೆ, ನಾಳೆ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.

ಏನಿದು ಘಟನೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಯುಟ್ಯೂಬರ್ ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಅಸ್ಥಿಪಂಜರ ಶೋಧ ಕಾರ್ಯಾಚರಣೆ ಸ್ಥಳದ ಸಮೀಪ ಹಲ್ಲೆ ನಡೆಸಲಾಗಿದೆ. ನೇತ್ರಾವತಿಯ ಪಾಂಗಳ ಬಳಿ ಪ್ರತಿಷ್ಠಿತ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ. ಸುಳ್ಳು ವರದಿ ಮಾಡಿದ್ದಾರೆ ಎಂದು ಗ್ರಾಮಸ್ಥರು ಯೂಟ್ಯೂಬರ್ ಗಳ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ವಿರೋಧಿಸಿ ಯೂಟ್ಯೂಬರ್ ಗಳ ಪರ ಯುವಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಎರಡೂ ಕಡೆಯವರ ನಡುವೆ ಕೈ ಕೈ ಮಿಲಾವಣೆಯಾಗಿದೆ. ಪ್ರತಿಷ್ಠಿತ ಕುಟುಂಬದ ಮೇಲೆ ಸುಳ್ಳು ಆರೋಪ ಮಾಡಿ ವರದಿ ಮಾಡಲಾಗಿದೆ ಎಂದು ಗ್ರಾಮಸ್ಥರು ಹೋರಾಟಗಾರರ ನಡುವೆ ಸಂಘರ್ಷ ಉಂಟಾಗಿದೆ.

ಅಜಯ್, ಅಭಿಷೇಕ್, ಸಂತೋಷ್ ಅವರ ಮೇಲೆ ದಾಳಿ ನಡೆಸಿ ಹಲ್ಲೆ ನಡೆಸಲಾಗಿದೆ. ಕ್ಯಾಮೆರಾ ಕಸಿದುಕೊಂಡು ಹಾನಿ ಮಾಡಲಾಗಿದೆ ಎನ್ನಲಾಗಿದ್ದು, ಈ ವೇಳೆ ಪರಿಸ್ಥಿತಿ ಕೈ ಮೀರಿದೆ. ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಅನೇಕ ವಾಹನಗಳ ಗಾಜು ಪುಡಿಪುಡಿಯಾಗಿವೆ. ಯುವಕರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದ್ದು, ಭಾರೀ ಸಂಖ್ಯೆಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಘಟನೆಯಲ್ಲಿ ಹಲ್ಲೆಗೊಳಗಾದ ನಾಲ್ವರು ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ,

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular