HomeIndiaಮಹಿಳಾ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಎನ್ ಕೌಂಟರ್ ನಲ್ಲಿ ಹತ್ಯೆ

ಮಹಿಳಾ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಎನ್ ಕೌಂಟರ್ ನಲ್ಲಿ ಹತ್ಯೆ

ಅಯೋಧ್ಯಾ: ರೈಲಿನಲ್ಲಿ ಮಹಿಳಾ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಉತ್ತರ ಪ್ರದೇಶ ಪೊಲೀಸರ ಎನ್ ಕೌಂಟರ್ನಲ್ಲಿ ಸಾವನ್ನಪ್ಪಿದ್ದಾನೆ.

ಕಳೆದ ತಿಂಗಳು ರೈಲ್ವೆ ಕಂಪಾರ್ಟ್ ಮೆಂಟ್ ನಲ್ಲಿ ಅನೀಶ್ ಖಾನ್ ಎಂಬ ವ್ಯಕ್ತಿ ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಈ ಪ್ರಕರಣದಲ್ಲಿ ಆರೋಪಿ ಅನೀಶ್ ಖಾನ್ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಯನ್ನು ಅಯೋಧ್ಯೆಯಲ್ಲಿ ಬಂಧಿಸಲು ಯತ್ನಿಸಿದ್ದ ವೇಳೆ ಪೊಲೀಸರ ಮೇಲೆಯೇ ದಾಳಿಗೆ ಮುಂದಾಗಿದ್ದ. ಈ ವೇಳೆ ಪೊಲೀಸರು ಎನ್ ಕೌಂಟರ್ ನಡೆಸಿದ್ದು, ಗುಂಡೇಟಿಗೆ ಆರೋಪಿ ಸಾವನ್ನಪ್ಪಿದ್ದಾನೆ. ಎನ್ ಕೌಂಟರ್ ಕಾರ್ಯಾಚರಣೆ ವೇಳೆ ಆರೋಪಿಯೊಂದಿಗಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ. ಆಜಾದ್ ಖಾನ್ ಹಾಗೂ ವಿಶಂಭರ್ ದಯಾಳ್ ಎಂಬ ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ಯಾಚರಣೆಯ ವೇಳೆ ಓರ್ವ ಪೊಲೀಸ್ ಅಧಿಕಾರಿಗೂ ಗಾಯವಾಗಿದೆ. ಉತ್ತರ ಪ್ರದೇಶ ಪೊಲೀಸ್ ಹಾಗೂ ಲಖನೌ ವಿಶೇಷ ಕಾರ್ಯಪಡೆ ಜಂಟಿ ಕಾರ್ಯಾಚರಣೆ ನಡೆಸಿತ್ತು.

ಆಗಸ್ಟ್ 30ರಂದು ಅಯೋಧ್ಯಾ ನಿಲ್ದಾಣದ ಸರಯು ಎಕ್ಸ್ ಪ್ರೆಸ್ ರೈಲಿನ ಕಂಪಾರ್ಟ್ ಮೆಂಟ್ ನಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರ ಮುಖದ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಲಾಗಿತ್ತು. ತಲೆಯ ಭಾಗಕ್ಕೂ ಪೆಟ್ಟಾಗಿತ್ತು. ಗಾಯಾಳುವನ್ನು ಅಯೋಧ್ಯೆ ಕೆಜಿಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು.

 

For Latest News Updates, Join Our Whatsapp Community🚩
RELATED ARTICLES

Most Popular