ಉಡುಪಿ : ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ನಡೆದಿದೆ. ಈ ಬೆನ್ನಲ್ಲೇ ಇತ್ತ ಉಡುಪಿ ತಾಲೂಕಿನ ಆತ್ರಾಡಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ತಾಲೂಕಿನ ಅತ್ರಾಡಿಯಲ್ಲಿ ಮುಸ್ಲಿಂ ಅಟೋ ಚಾಲಕ ಅಬೂಬಕ್ಕರ್ ಮೇಲೆ ದಾಳಿ ನಡೆದಿದೆ. ಆಟೋ ಅಡ್ಡಗಟ್ಟಿ ಚಾಲಕ ಅಬೂಬಕ್ಕರ್ ಕೊಲೆ ಯತ್ನ ನಡೆದಿದೆ. ಸುಶಾಂತ್ ಹಾಗೂ ಸಂದೇಶ ಎಂಬುವವರು ಕೊಲೆಗೆ ಯತ್ನಿಸಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಕೊಲೆ ಯತ್ನ ನಡೆಸಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
You Might Also Like
TAGGED:ಸುಹಾಸ್ ಶೆಟ್ಟಿ’ ಕೊಲೆ ಕೇಸ್