BREAKING : ನಟ ಪ್ರಥಮ್ ಗೆ ಕೊಲೆ ಬೆದರಿಕೆ ಪ್ರಕರಣದಲ್ಲಿ ನಟೋರಿಯಸ್ ರೌಡಿಶೀಟರ್ ಗೌತಮ್ ಭಾಗಿ.!

ಬೆಂಗಳೂರು : ನಟ ಪ್ರಥಮ್ ಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಟೋರಿಯಸ್ ರೌಡಿಶೀಟರ್ ಗೌತಮ್ ಭಾಗಿಯಾಗಿದ್ದಾನೆ ಎನ್ನಲಾಗಿದೆ.

ಹೌದು. ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌತಮ್ ಬೇಕರಿ ರಘು ಜೊತೆ ಸೇರಿ ಪ್ರಥಮ್ ಗೆ ಕೊಲೆ ಬೆದರಿಕೆ ಹಾಕಿದ್ದನು ಎನ್ನಲಾಗಿದೆ. ಒಂದು ದಿನ ನಿನ್ನ ಕಥೆ ಮುಗಿಸ್ತೀನಿ ಅಂತ ಈತ ಕೊಲೆ ಬೆದರಿಕೆ ಹಾಕಿದ್ದನು ಎನ್ನಲಾಗಿದೆ. ರೌಡಿಶೀಟರ್ ಗೌತಮ್ ಸ್ಲಂ ಭರತ್ ಸೇರಿ ಹಲವು ರೌಡಿಗಳ ಜೊತೆ ನಂಟು ಹೊಂದಿದ್ದನು. ಜುಲೈ 22 ರಂದು ಬೇಕರಿ ರಘು ಜೊತೆ ಸೇರಿ ನಟ ಪ್ರಥಮ್ ಗೆ ಕೊಲೆ ಬೆದರಿಕೆ ಹಾಕಿದ್ದನು.

ಸದ್ಯ,, ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಕಿದ ಇಬ್ಬರ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.ಎ1 ಆರೋಪಿಯಾಗಿ ಬೇಕರಿ ರಘು ಹಾಗೂ ಎ2 ಆರೋಪಿಯಾಗಿ ಯಶಸ್ವಿನಿ ಹಾಗೂ ಇತರರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ನಟ ಪ್ರಥಮ್ ಗೆ ಕೊಲೆ ಬೆದರಿಕೆ ಹಾಕಿದ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ .

ಕೊಲೆ ಬೆದರಿಕೆ ಆರೋಪದ ಮೇರೆಗೆ ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟ ಪ್ರಥಮ್ ದೂರು ನೀಡಿದ್ದರು. ಬೆಂಗಳೂರು ಗ್ರಾಮಾಂತರ ಎಸ್ ಪಿ ಕಚೇರಿಗೆ ಆಗಮಿಸಿದ ನಟ ಪ್ರಥಮ್ ಬೇಕರಿ ರಘು & ಗ್ಯಾಂಗ್ ದೂರು ದಾಖಲಿಸಿದ್ದರು. ಇದೀಗ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.ಕಳೆದ ಜುಲೈ 22 ರಂದು ದೊಡ್ಡಬಳ್ಳಾಪುರದಲ್ಲಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಬೇಕರಿ ರಘು ಮತ್ತು ಆತನ ಗ್ಯಾಂಗ್ ನಟ ಪ್ರಥಮ್ ಗೆ ಡ್ರಾಗರ್ ನಿಂದ ಹಲ್ಲೆಗೆ ಯತ್ನಿಸಿದ್ದು ಕೊಲೆ ಬೆದರಿಕೆ ಹಾಕಿದ್ದರು. ಈ ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಎಸ್ ಪಿ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read