ಬೆಂಗಳೂರು : ಬೆಂಗಳೂರಲ್ಲಿ ಕಾಮುಕ ಅಟ್ಟಹಾಸ ಮೆರೆದಿದ್ದು, ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ.
ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವಿಘ್ನೇಶ್ ದಾಡು ಎಂಬಾತ ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಕೂಡಲೇ ಸ್ಥಳೀಯರು ಆತನನ್ನು ಹಿಡಿದು ಧರ್ಮದೇಟು ನೀಡಿದ್ದಾರೆ.ನಂತರ ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
