ಬೆಂಗಳೂರು : ಬೆಂಗಳೂರಿನ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಾಥಮಿಕ ವರದಿಯ ಪ್ರಕಾರ, ಪಿಜಿಯಲ್ಲಿ ವಾಸವಿದ್ದ ಯುವತಿ ಟೀ ಶಾಪ್ಗೆ ಹೋಗುತ್ತಿದ್ದಾಗ ರಸ್ತೆ ಬದಿಯಲ್ಲಿ ಕಸ ಆಯುವ ವ್ಯಕ್ತಿ ಸೈಬುಲ್ ಅರೆಸ್ಟ್ ಆಕೆಯನ್ನು ತಡೆದು ಎತ್ತಿಕೊಂಡು ಹೋಗಿ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಕೂಡಲೇ ಯುವತಿ ಜೋರಾಗಿ ಕಿರುಚಿಕೊಂಡಿದ್ದರಿಂದ ಸ್ಥಳೀಯರು ಆಕೆಯ ಸಹಾಯಕ್ಕೆ ಬಂದಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಯುವತಿ ಬಗ್ಗೆ ವೈಟ್ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.
ದೂರು ದಾಖಲಿಸಿಕೊಂಡ ವೈಟ್ಫೀಲ್ಡ್ ಪೊಲೀಸರು ತನಿಖೆ ಕೈಗೊಂಡು, ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

