ನವದೆಹಲಿ: ವಾಷಿಂಗ್ಟನ್ ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ಹಲವು ನಾಯಕರ ಮೇಲೆ ಗುಂಡಿನ ದಾಳಿಗೆ ಯತ್ನ ನಡೆದಿರುವುದನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ಹಿಂಸಾಚಾರಕ್ಕೆ ಸ್ಥಾನವಿಲ್ಲ, ಹಿಂಸಾಚಾರವನ್ನು ನಿಸ್ಸಂದಿಗ್ದವಾಗಿ ಖಂಡಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ವಾಷಿಂಗ್ಟನ್ ಡಿಸಿ ಹೋಟೆಲ್‌ನಲ್ಲಿ ನಡೆದ ಭದ್ರತಾ ಘಟನೆಯ ನಂತರ ಅಧ್ಯಕ್ಷ ಟ್ರಂಪ್, ಪ್ರಥಮ ಮಹಿಳೆ ಮತ್ತು ಉಪಾಧ್ಯಕ್ಷರು ಸುರಕ್ಷಿತವಾಗಿದ್ದಾರೆ ಮತ್ತು ಯಾವುದೇ ಹಾನಿಗೊಳಗಾಗಿಲ್ಲ ಎಂದು ತಿಳಿದು ಸಮಾಧಾನವಾಯಿತು. ಅವರ ನಿರಂತರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ನನ್ನ ಶುಭಾಶಯಗಳನ್ನು ಕೋರುತ್ತೇನೆ. ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ ಮತ್ತು ಅದನ್ನು ನಿಸ್ಸಂದಿಗ್ಧವಾಗಿ ಖಂಡಿಸಬೇಕು ಮೋದಿ ತಿಳಿಸಿದ್ದಾರೆ.

