HomeLatest Newsಇನ್ನು ರಾಜ್ಯದ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗದೇ ಹಾಜರಾತಿ: ‘ನಿರಂತರ’ ಯೋಜನೆಯಡಿ ‘ಎಐ’ ಫೇಸ್ ರೆಕಗ್ನಿಷನ್...

ಇನ್ನು ರಾಜ್ಯದ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗದೇ ಹಾಜರಾತಿ: ‘ನಿರಂತರ’ ಯೋಜನೆಯಡಿ ‘ಎಐ’ ಫೇಸ್ ರೆಕಗ್ನಿಷನ್ ಬಳಸಿ ಹೊಸ ಹಾಜರಾತಿ ವ್ಯವಸ್ಥೆ ಜಾರಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಎಐ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಲಾಗುವುದು. ಇನ್ನು ಮುಂದೆ ಹೆಸರು ಕೂಗುವುದಿಲ್ಲ. ಮೊಬೈಲ್ ನಲ್ಲಿ ಫೋಟೋ ಸೆರೆ ಹಿಡಿಯಲಾಗುವುದು. ಫೇಸ್ ರೆಕಗ್ನಿಷನ್ ಬಳಸಿ ಹಾಜರಿ ಹಾಕಲಾಗುತ್ತದೆ.

ಪ್ರಸಕ್ತ ವರ್ಷದಿಂದಲೇ ಇದು ಜಾರಿಗೆ ಬರಲಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರನ್ನು ಕೂಗಿ ಹಾಜರಾತಿ ಪಡೆಯುವ ಬದಲಿಗೆ ಶಿಕ್ಷಕರು ಮೊಬೈಲ್ ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸುವ ಮೂಲಕ ಹಾಜರಾತಿ ದಾಖಲಿಸಲಿದ್ದಾರೆ.

‘ನಿರಂತರ’ ಯೋಜನೆಯಡಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಸೇರಿ 52,686 ಶಾಲೆಗಳ 52 ಲಕ್ಷಕ್ಕೂ ಹೆಚ್ಚು ಮಕ್ಕಳ ಹಾಜರಾತಿಯನ್ನು ಕೃತಕ ಬುದ್ಧಿಮತ್ತೆ ಚಾಲಿತ ಮುಖ ಚಹರೆ ಗುರುತು ಆಧಾರಿತವಾಗಿ ತೆಗೆದುಕೊಳ್ಳಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕ್ಷಕರ ಮೊಬೈಲ್ ಆ್ಯಪ್ ನ ಬಳಸಿ ವಿದ್ಯಾರ್ಥಿಗಳ ಫೋಟೋ ಸೆರೆ ಹಿಡಿಯಲಾಗುವುದು. ಫೋಟೋ ಮೂಲಕ ವಿದ್ಯಾರ್ಥಿಗಳ ಹಾಜರಾತಿ ಖಚಿತಪಡಿಸುವ ವ್ಯವಸ್ಥೆ ಇದಾಗಿದೆ. ಇದರಿಂದ ನಕಲಿ ಹಾಜರಾತಿ, ಅನುದಾನ ದುರ್ಬಳಕೆ ತಡೆಯಬಹುದಾಗಿದೆ. ನಿರಂತರ ಯೋಜನೆಯಡಿ 52 ಕೋಟಿ ರೂ. ವೆಚ್ಚದಲ್ಲಿ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular