HomeKarnatakaದ್ವಿತೀಯ ಪಿಯುಸಿ ಮೌಲ್ಯಮಾಪನಕ್ಕೆ ನಿಯೋಜಿತ ಉಪನ್ಯಾಸಕರ ಹಾಜರಿ ಕಡ್ಡಾಯ: ತಪ್ಪಿದಲ್ಲಿ ಶಿಸ್ತುಕ್ರಮ

ದ್ವಿತೀಯ ಪಿಯುಸಿ ಮೌಲ್ಯಮಾಪನಕ್ಕೆ ನಿಯೋಜಿತ ಉಪನ್ಯಾಸಕರ ಹಾಜರಿ ಕಡ್ಡಾಯ: ತಪ್ಪಿದಲ್ಲಿ ಶಿಸ್ತುಕ್ರಮ

2026ರ ದ್ವಿತೀಯ ಪಿಯುಸಿ ಪರೀಕ್ಷೆ- 1 ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಕ್ಕೆ ಮಂಡಲಿಯಿಂದ ನಿಯೋಜಿಸಲ್ಪಡುವ ಪ್ರಾಂಶುಪಾಲರು /ಉಪನ್ಯಾಸಕರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸೂಚಿಸಿದೆ.

2026ರ ದ್ವಿತೀಯ ಪಿಯುಸಿ ಪರೀಕ್ಷೆ-1 ನಿಗದಿತ ವೇಳಾಪಟ್ಟಿಯಂತೆ ನಡೆಯುತ್ತಿದ್ದು, ಸದರಿ ಪರೀಕ್ಷೆಯ ಫಲಿತಾಂಶವನ್ನು 2026ರ ಏಪ್ರಿಲ್ ಮೊದಲನೇ ವಾರದಲ್ಲಿ ಪ್ರಕಟಿಸುವ ಉದ್ದೇಶದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿಯವರು ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಶಿವಮೊಗ್ಗ, ಮಂಗಳೂರು, ಮೈಸೂರು, ಬೆಳಗಾವಿ, ಧಾರವಾಡ, ಕಲಬುರಗಿ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಒಟ್ಟು 68 ಮೌಲ್ಯಮಾಪನ ಕೇಂದ್ರಗಳನ್ನು ನಿಗದಿಪಡಿಸಿರುವುದಾಗಿ ಉಲ್ಲೇಖಿತ ಪತ್ರದಲ್ಲಿ ತಿಳಿಸಿರುತ್ತಾರೆ.

ಸದರಿ ಮೌಲ್ಯಮಾಪನ ಕಾರ್ಯಗಳನ್ನು ಸಮರ್ಪಕವಾಗಿ ಮತ್ತು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ದೃಷ್ಟಿಯಿಂದ ಮೌಲ್ಯಮಾಪನ ಕೇಂದ್ರಗಳಿಗೆ ಶಿಬಿರದ ಮೇಲ್ವಿಚಾರಕರು, ಮುಖ್ಯ/ಉಪ ಮುಖ್ಯ ಮೌಲ್ಯಮಾಪಕರು ಹಾಗೂ ಸಹಾಯಕ ಮೌಲ್ಯಮಾಪಕರುಗಳಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ನಿಯೋಜಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದ್ದರಿಂದ, ಮಂಡಲಿಯಿಂದ ಮೌಲ್ಯಮಾಪನ ಕಾರ್ಯಗಳಿಗೆ ನಿಯೋಜಿಸಲ್ಪಡುವ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು/ಉಪನ್ಯಾಸಕರುಗಳು ಮೌಲ್ಯಮಾಪನ ಕೇಂದ್ರಗಳಿಗೆ ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಯಾವುದೇ ಕಾರಣಕ್ಕೂ ಗೈರು ಹಾಜರಾಗದೆ ಕಡ್ಡಾಯವಾಗಿ ಹಾಜರಾಗಿ, ತಮಗೆ ವಹಿಸಲಾದ ಕರ್ತವ್ಯಗಳನ್ನು ಸಂಪೂರ್ಣ ಜವಾಬ್ದಾರಿತನದಿಂದ ಮತ್ತು ಸಮಯಪಾಲನೆಯೊಂದಿಗೆ ಕಡ್ಡಾಯವಾಗಿ ನಿರ್ವಹಿಸುವಂತೆ ಸೂಚಿಸಿದೆ.

ಜಿಲ್ಲಾ ಉಪ ನಿರ್ದೇಶಕರು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, KSEAB ಯಿಂದ ನಿಯೋಜಿಸಲ್ಪಡುವ ಎಲ್ಲಾ ಪ್ರಾಂಶುಪಾಲರು / ಉಪನ್ಯಾಸಕರು ಮೌಲ್ಯಮಾಪನ ಕಾರ್ಯಗಳಿಗೆ ಕಡ್ಡಾಯವಾಗಿ ಹಾಜರಾಗಿ ಕರ್ತವ್ಯ ನಿರ್ವಹಿಸುವ ಕುರಿತು ಖಚಿತಪಡಿಸಿಕೊಳ್ಳಲು ತಿಳಿಸಿದೆ.

ಕರ್ನಾಟಕ ಶಿಕ್ಷಣ ಕಾಯ್ದೆ, 1983ರ ಕಲಂ 28 ರನ್ವಯ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು / ಉಪನ್ಯಾಸಕರು ಪರೀಕ್ಷೆ ಹಾಗೂ ಮೌಲ್ಯಮಾಪನ ಕಾರ್ಯಗಳಿಗೆ ಸಂಬಂಧಿಸಿದಂತೆ ಮಂಡಲಿಯಿಂದ ನಿಯೋಜಿಸಲ್ಪಡುವ ಕರ್ತವ್ಯಗಳನ್ನು ಕಡ್ಡಾಯವಾಗಿ ನಿರ್ವಹಿಸತಕ್ಕದ್ದು. ಮಂಡಲಿಯಿಂದ ನಿಯೋಜಿಸಲ್ಪಟ್ಟ ಮೌಲ್ಯಮಾಪನ ಕರ್ತವ್ಯಗಳಿಗೆ ಗೈರುಹಾಜರಾಗುವುದು, ಕರ್ತವ್ಯ ನಿರ್ಲಕ್ಷ್ಯತೆ ತೋರಿಸುವುದು, ವಿಳಂಬವಾಗಿ ಹಾಜರಾಗುವುದು ಅಥವಾ ಮೌಲ್ಯಮಾಪನ ಕಾರ್ಯಗಳಲ್ಲಿ ಅಲಕ್ಷತೆ ತೋರಿಸುವುದು ಕಂಡುಬಂದಲ್ಲಿ, ಕರ್ನಾಟಕ ಶಿಕ್ಷಣ ಕಾಯ್ದೆ, 1983ರ ಕಲಂ 122 ರನ್ವಯ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಅಲ್ಲದೇ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು/ಉಪನ್ಯಾಸಕರು ಮೌಲ್ಯಮಾಪನ ಕರ್ತವ್ಯ ನಿರ್ವಹಣೆಯಲ್ಲಿ ವಿಫಲವಾದಲ್ಲಿ, ಸದರಿ ನೌಕರರ ವಿರುದ್ಧ ಕರ್ನಾಟಕ ನಾಗರಿಕ ಸೇವಾ ನಿಯಮಗಳು (ವರ್ಗೀಕರಣ, ನಿಯಂತ್ರಣ ಮತ್ತು ಅಪೀಲು) ನಿಯಮಾವಳಿ, 1957ರ ನಿಯಮ 11 ಹಾಗೂ 12 ರನ್ವಯ ಶಿಸ್ತು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular