ಬೆಂಗಳೂರಿಗರ ಗಮನಕ್ಕೆ : ನೀರಿನ ಸಮಸ್ಯೆ ಇದ್ದರೆ ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ಬೆಂಗಳೂರಿನಲ್ಲಿ ನೀರಿಗೆ ಆಹಾಕಾರ ಉಂಟಾಗಿದ್ದು, ಜನರು ಖಾಲಿ ಕೊಡ ತೋರಿಸಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ನೀರಿನ ಸಮಸ್ಯೆ ಇರುವ ಪ್ರದೇಶಗಳಿಗೆ ಸರ್ಕಾರ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದೆ.

ಬೇಸಿಗೆ ಹಿನ್ನೆಲೆಯಲ್ಲಿ ಕೇವಲ ಬೆಂಗಳೂರು ಮಾತ್ರವಲ್ಲ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ತಲೆಧೋರಿದೆ. ಕೊಳವೆ ಬಾವಿಗಳು ಬತ್ತಿ ಹೋಗುತ್ತಿದ್ದು, ಬಾವಿಗಳು ಇಂಗುತ್ತಿವೆ. ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವ ಸಭೆ ನಡೆದಿದೆ.

ಬಿಬಿಎಂಪಿ ಹೊರ ವಲಯದ 35 ವಾರ್ಡ್ ವ್ಯಾಪ್ತಿಗೆ ಬರುವ 110 ಹಳ್ಳಿಗಳಲ್ಲಿನ ನೀರಿನ ಸಮಸ್ಯೆ ಪರಿಹಾರಕ್ಕೆ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೊಠಡಿ ಸ್ಥಾಪಿಸಿದ್ದು, ನೀರಿನ ಸಮಸ್ಯೆ ಕುರಿತು ಸಾರ್ವಜನಿಕರು ಬಿಬಿಎಂಪಿಯ ಸಹಾಯವಾಣಿ ಸಂಖ್ಯೆ ‘1533’ ಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಮೇಲುಸ್ತುವಾರಿಗಾಗಿ ಮುಖ್ಯ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹಾಗೆಯೇ ಉಳಿದ ವಾರ್ಡ್ ಗಳಲ್ಲಿ ನೀರಿನ ಸಮಸ್ಯೆಗೆ ಜಲಮಂಡಳಿಯ ಸಹಾಯವಾಣಿ ಸಂಖ್ಯೆ 1916 0 ಮಾಡಬಹುದಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read