BIG NEWS : ಬೆಂಗಳೂರಿಗರೇ ಗಮನಿಸಿ : ಹೊಸ ವರ್ಷಾಚರಣೆಗೆ ಇಂದು ಮಧ್ಯರಾತ್ರಿ 1 ಗಂಟೆವರೆಗೆ ಮಾತ್ರ ಅವಕಾಶ.!

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಡಿಸೆಂಬರ್ 31ರ ರಾತ್ರಿ 1ರ ವರೆಗೆ ಸಾರ್ವತ್ರಿಕವಾಗಿ ಹೊಸ ವರ್ಷ ಆಚರಿಸಲು ಅನುಮತಿಯಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಅವರು ತಿಳಿಸಿದ್ದಾರೆ.

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಬೆಂಗಳೂರು ನಗರದಲ್ಲಿ ಭದ್ರತೆಗಾಗಿ 11,830 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಅವರು ತಿಳಿಸಿದ್ದಾರೆ.

ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರು ಒಟ್ಟಾಗಿ ಸೇರುವುದರಿಂದ ಅಪಘಾತಗಳು ಸೇರಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಡಿಸೆಂಬರ್ 31 ರಂದು ರಾತ್ರಿ 11 ರಿಂದ ಜನವರಿ 1ರ ಬೆಳಗ್ಗೆ 6ರ ವರೆಗೆ ಬೆಂಗಳೂರು ನಗರದ ಎಲ್ಲಾ ಮೇಲ್ಸೇತುವೆಗಳಲ್ಲಿ (ಕೆಐಎ ವಿಮಾನ ನಿಲ್ದಾಣಕ್ಕೆ ಹೋಗುವ ಎಲಿವೇಟೆಡ್ ಎಕ್ಸ್ಪ್ರೆಸ್ವೇ ಹೊರತುಪಡಿಸಿ) ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ವಿಮಾನ ನಿಲ್ದಾಣದ ಎಲಿವೇಟೆಡ್ ಎಕ್ಸ್ಪ್ರೆಸ್ವೇಯಲ್ಲಿ ದ್ವಿಚಕ್ರ ವಾಹನಗಳ ಸಂಚಾರವನ್ನು ಡಿಸೆಂಬರ್ 31ರ ರಾತ್ರಿ 10 ರಿಂದ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೂ ನಿರ್ಬಂಧಿಸಲಾಗಿದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಎಂ.ಎನ್.ಅನುಚೇತ್ ಅವರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read