HomeLatest Newsಬೆಂಗಳೂರಿಗರೇ ಎಚ್ಚರ : 'ಕಾವೇರಿ' ನೀರು ಪೋಲು ಮಾಡಿದ್ರೆ ಬೀಳುತ್ತೆ 5000 ರೂ. ದಂಡ.!

ಬೆಂಗಳೂರಿಗರೇ ಎಚ್ಚರ : ‘ಕಾವೇರಿ’ ನೀರು ಪೋಲು ಮಾಡಿದ್ರೆ ಬೀಳುತ್ತೆ 5000 ರೂ. ದಂಡ.!

ಬೆಂಗಳೂರು :   ಬೇಸಿಗೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನೀರಿನ ಅಭಾವ ಉಂಟಾಗದಂತೆ ತಡೆಯಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ . ಕುಡಿಯುವ ನೀರನ್ನು (ಕಾವೇರಿ ನೀರು) ಅತಿ ಅವಶ್ಯಕವಲ್ಲದ ಉದ್ದೇಶಗಳಿಗೆ ಬಳಸುವುದನ್ನು ನಿಷೇಧಿಸಲಾಗಿದೆ. ಈ ನಿಯಮ ಉಲ್ಲಂಘಿಸಿದರೆ ಮೊದಲ ಬಾರಿಗೆ ₹5,000 ದಂಡ ವಿಧಿಸಲಾಗುತ್ತದೆ. ಉಲ್ಲಂಘನೆ ಮುಂದುವರಿದರೆ ಪ್ರತಿದಿನಕ್ಕೆ ₹500 ಹೆಚ್ಚುವರಿ ದಂಡ ವಿಧಿಸಲಾಗುತ್ತದೆ.

ಹೌದು,   ಬೇಸಿಗೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ನೀರಿನ ಅಭಾವ ಉಂಟಾಗದಂತೆ ತಡೆಯಲು ಜಲಮಂಡಳಿ ಈ ನಿರ್ಧಾರ ಮಾಡಿದೆ. ಕುಡಿಯುವ ನೀರನ್ನು (ಕಾವೇರಿ ನೀರು) ಕಾರು, ಬೈಕ್ ತೊಳೆಯಲು ಅಥವಾ ಅನಗತ್ಯವಾಗಿ ಪೋಲು ಮಾಡಿದರೆ 5,000 ರೂಪಾಯಿ ದಂಡ ವಿಧಿಸಲಾಗುತ್ತದೆ.ನೀರು ಪೋಲಾಗುತ್ತಿದೆಯೇ ಎಂಬುದನ್ನು ಪರೀಕ್ಷಿಸಲು ‘ಬ್ಲೂ ಫೋರ್ಸ್’ ತಂಡ ಮತ್ತು ವೀಕ್ಷಕರನ್ನು ನೇಮಿಸಲಾಗಿದೆ.

ಪರ್ಯಾಯ ವ್ಯವಸ್ಥೆ: ಅಂತರ್ಜಲ ಕುಸಿಯುವ ಪ್ರದೇಶಗಳಲ್ಲಿ ಮತ್ತು ಬೋರ್‌ವೆಲ್‌ಗಳಲ್ಲಿ ನೀರು ಕಡಿಮೆಯಾದಲ್ಲಿ ಮಿನಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲು ಜಲಮಂಡಳಿ ಸಿದ್ಧತೆ ಮಾಡಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರ್ವಜನಿಕರಿಗೆ ಮನವಿ: ಜನರು ನೀರಿನ ಮಹತ್ವ ಅರಿತು ಮಿತವಾಗಿ ಬಳಸಬೇಕು. ಜಲಕ್ಷಾಮ ತಡೆಗಟ್ಟಲು ಮತ್ತು ದಂಡದಿಂದ ತಪ್ಪಿಸಿಕೊಳ್ಳಲು ನೀರನ್ನು ವ್ಯರ್ಥ ಮಾಡಬಾರದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ಎಂಜಿನಿಯರ್‌ಗಳು ಮತ್ತು ಜಲ ನಿರೀಕ್ಷಕರು ಕಚೇರಿಯಲ್ಲಿ ಕೂರುವಂತಿಲ್ಲ ಪ್ರತಿದಿನ ತಮ್ಮ ವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಿ ನೀರಿನ ಸಮಸ್ಯೆಯನ್ನು ಪರಿಶೀಲಿಸಬೇಕು ಎಂದು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ:

ದೂರು ನೀಡಲು ಸಹಾಯವಾಣಿ

ಸಾರ್ವಜನಿಕರು ಎಲ್ಲಾದರೂ ನೀರು ಪೋಲಾಗುತ್ತಿರುವುದು ಕಂಡುಬಂದರೆ ಜಲಮಂಡಳಿಯ ಸಹಾಯವಾಣಿ ಸಂಖ್ಯೆ 1916 ಕ್ಕೆ ಕರೆ ಮಾಡಿ ದೂರು ನೀಡಬಹುದು. ಒಟ್ಟಾರೆಯಾಗಿ, ಈ ಬಾರಿಯ ಬೇಸಿಗೆಯಲ್ಲಿ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಜಲಮಂಡಳಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular