HomeKarnatakaಬೆಂಗಳೂರಿನ ವಾಹನ ಸವಾರರೇ ಗಮನಿಸಿ ; 3 ತಿಂಗಳು ಕೆ.ಆರ್. ಮಾರ್ಕೆಟ್ ಮೇಲ್ಸೇತುವೆ ಬಂದ್

ಬೆಂಗಳೂರಿನ ವಾಹನ ಸವಾರರೇ ಗಮನಿಸಿ ; 3 ತಿಂಗಳು ಕೆ.ಆರ್. ಮಾರ್ಕೆಟ್ ಮೇಲ್ಸೇತುವೆ ಬಂದ್

ಬೆಂಗಳೂರು : ಬೆಂಗಳೂರು ನಗರದ ವಾಹನ ಸವಾರರಿಗೆ ಮತ್ತೊಂದು ದೊಡ್ಡ ತಲೆನೋವು ಎದುರಾಗಿದೆ. ಕೆ.ಆರ್. ಮಾರ್ಕೆಟ್ ಮೇಲ್ಸೇತುವೆಯ ಚಾಮರಾಜಪೇಟೆ ತಿರುವಿನ ರಸ್ತೆ ವೈಟ್‌ಟಾಪಿಂಗ್ ಕಾಮಗಾರಿಯ ಹಿನ್ನೆಲೆಯಲ್ಲಿ ಮುಂದಿನ ಮೂರು ತಿಂಗಳ ಕಾಲ ಬಂದ್ ಮಾಡಲಾಗಿದೆ. ಇದೇ ವೇಳೆ ಫ್ಲೈಓವರ್ ಕೆಳಭಾಗದಲ್ಲಿದ್ದ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆಯನ್ನೂ ಅಧಿಕಾರಿಗಳು ಆರಂಭಿಸಿದ್ದು, ಈ ಭಾಗದಲ್ಲಿ ಸಂಚಾರ ದಟ್ಟಣೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

ಕೆ.ಆರ್. ಮಾರ್ಕೆಟ್ ಮೇಲ್ಸೇತುವೆ ಮೂಲಕ ಪ್ರತಿದಿನ ವಿಕ್ಟೋರಿಯಾ ಆಸ್ಪತ್ರೆ, ಮಿಂಟೋ ಆಸ್ಪತ್ರೆ, ವಾಣಿವಿಲಾಸ ಆಸ್ಪತ್ರೆ, ಚಾಮರಾಜಪೇಟೆ, ಬಸವನಗುಡಿ ಸೇರಿದಂತೆ ನಗರದ ಹಲವು ಪ್ರಮುಖ ಪ್ರದೇಶಗಳಿಗೆ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆ ಬಂದ್ ಆಗಿರುವುದರಿಂದ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಇದರ ಜೊತೆಗೆ, ಫ್ಲೈಓವರ್ ಕೆಳಭಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಅಂಗಡಿಗಳನ್ನು ತೆರವುಗೊಳಿಸಲು ಜಿಬಿಎ ಅಧಿಕಾರಿಗಳು ಮೂರು ಜೆಸಿಬಿಗಳೊಂದಿಗೆ ಭಾರೀ ಕಾರ್ಯಾಚರಣೆ ಆರಂಭಿಸಿದ್ದಾರೆ. ಸುಮಾರು 20 ರಿಂದ 25 ಅಂಗಡಿಗಳನ್ನು ತೆರವುಗೊಳಿಸಲಾಗುತ್ತಿದ್ದು, ಕೆಲ ವ್ಯಾಪಾರಿಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹಲವು ವರ್ಷಗಳಿಂದ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳನ್ನು ಏಕಾಏಕಿ ತೆರವುಗೊಳಿಸಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ಸಾರ್ವಜನಿಕ ಸುರಕ್ಷತೆ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ಉದ್ದೇಶದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ರಸ್ತೆ ಬಂದ್ ಮತ್ತು ತೆರವು ಕಾರ್ಯಾಚರಣೆ ಒಂದೇ ವೇಳೆ ನಡೆಯುತ್ತಿರುವುದರಿಂದ ಕೆ.ಆರ್. ಮಾರ್ಕೆಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚುವ ಸಾಧ್ಯತೆ ಇದೆ. ಆದ್ದರಿಂದ ವಾಹನ ಸವಾರರು ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular