ಬೆಂಗಳೂರಿನ ‘ವಾಹನ ಸವಾರರೇ’ ಗಮನಿಸಿ : ಈ ರಸ್ತೆಗಳಲ್ಲಿ ಇಂದು ‘ಸಂಚಾರ ನಿರ್ಬಂಧ’, ಇಲ್ಲಿದೆ ಪರ್ಯಾಯ ಮಾರ್ಗ.!

ಬೆಂಗಳೂರು : 31.03.2025 ರಂದು ರಂಜಾನ್ ಹಬ್ಬದ ಪ್ರಯುಕ್ತ ಚಾಮರಾಜಪೇಟೆ ಸಂಚಾರ ಪೊಲೀಸ್ ಸರಹದ್ದಿನ ಬಿಬಿ ಜಂಕ್ಷನ್ ಹತ್ತಿರದ ಮಸೀದಿ ಹಾಗೂ ಬಿಬಿಎಂಪಿ ಆಟದ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಭಾಗವಹಿಸುತ್ತಿರುವುದರಿಂದ ಈ ಕೆಳಕಂಡ ರಸ್ತೆಯ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ಬಳಸಲು ಕೋರಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.

ಸಂಚಾರ ಪಶ್ಚಿಮ ವಿಭಾಗ ಸಂಚಾರ ಪಶ್ಚಿಮ ಉಪ ವಿಭಾಗ
: ಪತ್ರಿಕಾ ಪ್ರಕಟಣೆ :
ಪ್ರತಿ ವರ್ಷದಂತೆ ಬೆಂಗಳೂರು ನಗರದ ಚಾಮರಾಜಪೇಟೆ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಮೈಸೂರು ರಸ್ತೆಯ ಬಿ.ಬಿ ಜಂಕ್ಷನ್ ಹತ್ತಿರದ ಮಸೀದಿ ಮತ್ತು ಚಾಮರಾಜಪೇಟೆ 1ನೇ ಮುಖ್ಯ ರಸ್ತೆಯ 7ನೇ ಅಡ್ಡರಸ್ತೆ ಬಳಿಯ ಬಿಬಿಎಂಪಿ ಆಟದ ಮೈದಾನದಲ್ಲಿ ದಿನಾಂಕ: 31.03.2025 ರಂದು ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಲು ಅಪಾರ ಸಂಖ್ಯೆಯಲ್ಲಿ ಸೇರುವುದರಿಂದ ಮೈಸೂರು ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ, ಕೆಳಕಂಡಂತೆ ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ.
ದಿನಾಂಕ: 31.03.2025 ರಂದು ಬೆಳಿಗ್ಗೆ 08-00 ಗಂಟೆಯಿಂದ ಪ್ರಾರ್ಥನೆ ಮುಗಿಯುವವರೆಗೆ
1) ಮೈಸೂರು ರಸ್ತೆಯ ಟೋಲ್ಗೇಟ್ ಜಂಕ್ಷನ್ ನಿಂದ ಬಿಬಿ ಜಂಕ್ಷನ್ ಮೂಲಕ ಬಿಜಿಎಸ್ ಪ್ರೈಓವರ್ ಮೇಲ್ಬಾಗದಿಂದ ಟೌನ್ಹಾಲ್ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಮೈಸೂರು ಕಡೆಯಿಂದ ಟೌನ್ಹಾಲ್ ಕಡೆಗೆ ಹೋಗುವ ವಾಹನಗಳು ಬ್ಯಾಟರಾಯನಪುರ ಸಂಚಾರ ಠಾಣಾ ಸರಹದ್ದಿನ ಕಿಮ್ಮೋ ಜಂಕ್ಷನ್ನಲ್ಲಿ ಎಡತಿರುವು ಪಡೆದುಕೊಂಡು ವಿಜಯನಗರ ಮೂಲಕ ಸಾಗಬಹುದು.
2) ಟೌನ್ಹಾಲ್ ಕಡೆಯಿಂದ ಮೈಸೂರು ಕಡೆಗೆ ಬಿಜಿಎಸ್ ಫೈಓವರ್ ಮೇಲ್ಬಾಗದಿಂದ ಬಿಬಿ ಜಂಕ್ಷನ್ ಮಾರ್ಗವಾಗಿ ಟೋಲ್ಗೇಟ್ ಜಂಕ್ಷನ್ ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
> ಟೌನ್ಹಾಲ್ ಕಡೆಯಿಂದ ಮೈಸೂರು ಕಡೆಗೆ ಹೋಗುವ ವಾಹನಗಳು ಬಿಜಿಎಸ್ ಫೈಓವರ್ ಕೆಳಗಡೆ ಸರ್ವಿಸ್ ರಸ್ತೆಯನ್ನು ಬಳಸಿಕೊಂಡು ಭಾರಿ ವಾಹನಗಳು ವೆಟರ್ನರಿ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ಗೂಡ್ ಶೆಡ್ ರಸ್ತೆ ಮೂಲಕ ಮತ್ತು ಲಘುವಾಹನಗಳು ಸಿರಸಿ ಜಂಕ್ಷನ್ನಲ್ಲಿ ಬಲ ತಿರುವು ಪಡೆದುಕೊಂಡು ಜಿ.ಜೆ ನಗರ-ಟ್ಯಾಂಕ್ ಬಂಡ್ ರಸ್ತೆ – ಬಿನ್ನಿಮಿಲ್ ಜಂಕ್ಷನ್- ಹುಣಸೇಮರ ಮೂಲಕ ಸಾಗುವುದು.
> ಬಸವನಗುಡಿ & ಚಾಮರಾಜಪೇಟೆ ಕಡೆಯಿಂದ ಮೆಜೆಸ್ಟಿಕ್ ಕಡೆಗೆ ಹೋಗುವಂತಹ ವಾಹನಗಳು ಚಾಮರಾಜಪೇಟೆ 1 ನೇ ಮುಖ್ಯರಸ್ತೆ, 5ನೇ ಅಡ್ಡ ರಸ್ತೆ ಮೂಲಕ ಮೈಸೂರು ರಸ್ತೆ, ಸಿರ್ಸಿ ಸರ್ಕಲ್, ಬಿನ್ನಿಮಿಲ್ ರಸ್ತೆಯ ಮೂಲಕ ಸಾಗುವುದು. ಸಾರ್ವಜನಿಕರು ಸಂಚಾರ ಪೊಲೀಸರೊಂದಿಗೆ ಸಹಕರಿಸಲು ಕೋರಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read