ಬೆಂಗಳೂರು : ಬೆಂಗಳೂರಿನ ಆಸ್ತಿ ಮಾಲೀಕರೇ ಗಮನಿಸಿ. ಶೇ.5ರಷ್ಟು ರಿಯಾಯಿತಿಯಡಿ ಆಸ್ತಿ ತೆರಿಗೆ ಪಾವತಿಸುವ ಗಡುವು ಮೇ.31 ರವರೆಗೆ ವಿಸ್ತರಣೆ ಮಾಡಲಾಗಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ದಿನಾಂಕ: 30-04-2025 ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗಿರುತ್ತದೆ.
ಬಿಬಿಎಂಪಿ ಕಾಯ್ದೆ 2020 ರ ಪ್ರಕರಣ 144 (8) ರಲ್ಲಿ ಸರ್ಕಾರವು ಪಾಲಿಕೆಯ ಶಿಫಾರಸ್ಸಿನ ಮೇರೆಗೆ ಅಧಿಸೂಚನೆ ಮೂಲಕ ಯಾವುದೇ ಹಣಕಾಸು ವರ್ಷಗಳಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಬಹುದೆಂದು ಉಲ್ಲೇಖಿಸಲಾಗಿರುತ್ತದೆ. ಆದುದರಿಂದ 2025-26 ನೇ ಸಾಲಿನ ಆಸ್ತಿತೆರಿಗೆ ರಿಯಾಯಿತಿ ಅವಧಿಯನ್ನು ದಿನಾಂಕ:31-05-2025 ರವರೆಗೆ ವಿಸ್ತರಿಸಿ, 2025-26 ನೇ ಸಾಲಿನ ಆಸ್ತಿತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ದಿನಾಂಕ: 31-05-2025 ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡುವ ಸಂಬಂಧ ಮಾನ್ಯ ಆಡಳಿತಗಾರರ ಉಲ್ಲೇಖ (1) ರ ನಡವಳಿಗಳಿಗೆ ಸರ್ಕಾರದ ಆದೇಶ ಕೋರಿ ಪ್ರಸ್ತಾವನೆ ಮಂಡಿಸಲಾಗಿ, ಸದರಿ ಪ್ರಸ್ತಾವನೆಗೆ ಸರ್ಕಾರದಿಂದ ಉಲ್ಲೇಖ (2) ರಂತೆ ಆದೇಶ ನೀಡಿ ಅಧಿಸೂಚನೆ ಹೊರಡಿಸಲಾಗಿರುತ್ತದೆ.
ಮೇಲಿನ ಹಿನ್ನಲೆಯಲ್ಲಿ ಸರ್ಕಾರದ ಆದೇಶದ ಅನ್ವಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿತೆರಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಿ, 2025-26 ನೇ ಸಾಲಿನ ಆಸ್ತಿತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ದಿನಾಂಕ:31-05-2025 ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗಿದೆ.
