HomeLatest NewsBIG NEWS : ಬೆಂಗಳೂರಿನ 'ಆಸ್ತಿ ಮಾಲೀಕ'ರೇ ಗಮನಿಸಿ : ಶೇ.5ರಷ್ಟು ರಿಯಾಯಿತಿಯಡಿ ಆಸ್ತಿ ತೆರಿಗೆ...

BIG NEWS : ಬೆಂಗಳೂರಿನ ‘ಆಸ್ತಿ ಮಾಲೀಕ’ರೇ ಗಮನಿಸಿ : ಶೇ.5ರಷ್ಟು ರಿಯಾಯಿತಿಯಡಿ ಆಸ್ತಿ ತೆರಿಗೆ ಪಾವತಿಸಲು ಇಂದೇ ಕೊನೆಯ ದಿನ

ಬೆಂಗಳೂರು : ಬೆಂಗಳೂರಿನ ಆಸ್ತಿ ಮಾಲೀಕರೇ ಗಮನಿಸಿ. ಶೇ.5ರಷ್ಟು ರಿಯಾಯಿತಿಯಡಿ ಆಸ್ತಿ ತೆರಿಗೆ ಪಾವತಿಸುವ ಗಡುವು ಮೇ.31 ರವರೆಗೆ ವಿಸ್ತರಣೆ ಮಾಡಲಾಗಿದ್ದು, ಇಂದೇ ಕೊನೆಯ ದಿನವಾಗಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ದಿನಾಂಕ: 30-04-2025 ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗಿರುತ್ತದೆ.

ಬಿಬಿಎಂಪಿ ಕಾಯ್ದೆ 2020 ರ ಪ್ರಕರಣ 144 (8) ರಲ್ಲಿ ಸರ್ಕಾರವು ಪಾಲಿಕೆಯ ಶಿಫಾರಸ್ಸಿನ ಮೇರೆಗೆ ಅಧಿಸೂಚನೆ ಮೂಲಕ ಯಾವುದೇ ಹಣಕಾಸು ವರ್ಷಗಳಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಬಹುದೆಂದು ಉಲ್ಲೇಖಿಸಲಾಗಿರುತ್ತದೆ. ಆದುದರಿಂದ 2025-26 ನೇ ಸಾಲಿನ ಆಸ್ತಿತೆರಿಗೆ ರಿಯಾಯಿತಿ ಅವಧಿಯನ್ನು ದಿನಾಂಕ:31-05-2025 ರವರೆಗೆ ವಿಸ್ತರಿಸಿ, 2025-26 ನೇ ಸಾಲಿನ ಆಸ್ತಿತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ದಿನಾಂಕ: 31-05-2025 ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡುವ ಸಂಬಂಧ ಮಾನ್ಯ ಆಡಳಿತಗಾರರ ಉಲ್ಲೇಖ (1) ರ ನಡವಳಿಗಳಿಗೆ ಸರ್ಕಾರದ ಆದೇಶ ಕೋರಿ ಪ್ರಸ್ತಾವನೆ ಮಂಡಿಸಲಾಗಿ, ಸದರಿ ಪ್ರಸ್ತಾವನೆಗೆ ಸರ್ಕಾರದಿಂದ ಉಲ್ಲೇಖ (2) ರಂತೆ ಆದೇಶ ನೀಡಿ ಅಧಿಸೂಚನೆ ಹೊರಡಿಸಲಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇಲಿನ ಹಿನ್ನಲೆಯಲ್ಲಿ ಸರ್ಕಾರದ ಆದೇಶದ ಅನ್ವಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿತೆರಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಿ, 2025-26 ನೇ ಸಾಲಿನ ಆಸ್ತಿತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ದಿನಾಂಕ:31-05-2025 ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular