HomeLatest Newsಭಕ್ತರ ಗಮನಕ್ಕೆ: ಸಂಪುಟ ಸಭೆ ಹಿನ್ನೆಲೆ ಇಂದಿನಿಂದ ಮೂರು ದಿನ ಮಲೆಮಹದೇಶ್ವರ ಬೆಟ್ಟದಲ್ಲಿ ವಾಸ್ತವ್ಯ ನಿರ್ಬಂಧ

ಭಕ್ತರ ಗಮನಕ್ಕೆ: ಸಂಪುಟ ಸಭೆ ಹಿನ್ನೆಲೆ ಇಂದಿನಿಂದ ಮೂರು ದಿನ ಮಲೆಮಹದೇಶ್ವರ ಬೆಟ್ಟದಲ್ಲಿ ವಾಸ್ತವ್ಯ ನಿರ್ಬಂಧ

ಚಾಮರಾಜನಗರ: ಏಪ್ರಿಲ್ 24 ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನ ಮಲೆಮಹದೇಶ್ವರ ಬೆಟ್ಟದಲ್ಲಿ ವಾಸ್ತವ್ಯಕ್ಕೆ ನಿರ್ಬಂಧ ಹೇರಲಾಗಿದೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಾಸ್ತವ್ಯಕ್ಕೆ ನಿರ್ಬಂಧ ಹೇರಲಾಗಿದೆ. ಮೂರು ದಿನ ಭಕ್ತರ ವಾಸ್ತವಕ್ಕೆ ಮಲೆ ಮಹದೇಶ್ವರ ಪ್ರಾಧಿಕಾರ ನಿರ್ಬಂಧ ಹೇರಿದೆ. ಸಚಿವರು, ಶಾಸಕರು, ಅಧಿಕಾರಿಗಳಿಗೆ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಭಕ್ತರಲ್ಲಿ ಗೊಂದಲ ಮೂಡದೆ ಇರಲಿ ಎಂದು ಪ್ರಾಧಿಕಾರ ಪ್ರಕಟಣೆ ನೀಡಿದ್ದು, ಭಕ್ತರು ಸಹಕರಿಸಬೇಕೆಂದು ಮನವಿ ಮಾಡಲಾಗಿದೆ.

ರಾಜ್ಯ ಸಚಿವ ಸಂಪುಟ ಸಭೆಗೆ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. ಸಭೆ ಮುಗಿದ ನಂತರ ಸಿಎಂ ಪೂರ್ಣಗೊಂಡ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಂಪುಟ ದರ್ಜೆಯ ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು ಆಗಮಿಸಲಿರುವ ಹಿನ್ನೆಲೆಯಲ್ಲಿ ಏಪ್ರಿಲ್ 22 ರಿಂದ 24ರ ವರೆಗೆ ಮೂರು ದಿನಗಳ ಕಾಲ ಭಕ್ತಾದಿಗಳ ವಾಸ್ತವ್ಯಕ್ಕೆ ಪ್ರಾಧಿಕಾರದ ಕೊಠಡಿಗಳು ಲಭ್ಯವಿರುವುದಿಲ್ಲ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಈ. ರಘು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular