ಶಿವಮೊಗ್ಗ : ಶಿಕಾರಿಪುರ ತೋಟಗಾರಿಕೆ ಇಲಾಖೆಯು 2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ವಿವಿಧ ಕಾರ್ಯಕ್ರಮಗಳಡಿ ಹೊಸತೋಟ ಪ್ರದೇಶ ವಿಸ್ತರಣೆಯಡಿ ಅಂಗಾಂಶ ಬಾಳೆ, ಬಿಡಿಹೂಗಳು, ಕಟ್ ಪ್ಲವರ್, ಸುಗಂಧರಾಜ, ಕಾಳುಮೆಣಸು, ತರಕಾರಿ ಪ್ರದೇಶ ವಿಸ್ತರಣೆ, ಮಾವು ಪುನಃಶ್ಚೇತನ, ಕೃಷಿಹೊಂಡ, ತರಕಾರಿ ಬೆಳೆಗೆ ಪ್ಲಾಸ್ಟಿಕ್ ಹೊದಿಕೆ, ಪ್ಯಾಕ್ಹೌಸ್ ಮತ್ತು ಪ್ರಾಥಮಿಕ ಸಂಸ್ಕರಣಾ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಶಿಕಾರಿಪುರ ತಾಲ್ಲೂಕಿನ ಆಸಕ್ತ ಹಾಗೂ ಅರ್ಹ ರೈತರು ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 31 ರೊಳಗೆ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಶಿಕಾರಿಪುರ ತೋಟಗಾರಿಕೆ ಇಲಾಖಾ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08187-223544 ನ್ನು ಸಂಪರ್ಕಿಸುವುದು.
📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.