ರೈತರೇ ಗಮನಿಸಿ : ಮೀನು ಕೃಷಿ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ : ಮೀನುಗಾರಿಕೆ ಇಲಾಖೆಯಿಂದ ಚಿಂತಾಮಣಿ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ ಮತ್ತು ಮಂಚೇನಹಳ್ಳಿ ತಾಲ್ಲೂಕುಗಳಲ್ಲಿ ಮೀನು ಕೃಷಿ ಮಾಡುವ ರೈತರಿಗೆ ಮೀನು ಕೃಷಿ ತರಬೇತಿಯನ್ನು ಸೆ. 23 ರಂದು ಬೆಳಿಗ್ಗೆ 10ಕ್ಕೆ ಚಿಂತಾಮಣಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಗೌರಿಬಿದನೂರು, ಗುಡಿಬಂಡೆ, ಬಾಗೇಪಲ್ಲಿ ಮತ್ತು ಚೇಳೂರು ತಾಲ್ಲೂಕುಗಳ ಮೀನು ಕೃಷಿ ಮಾಡುವ ರೈತರಿಗೆ ಮೀನು ಕೃಷಿ ತರಬೇತಿಯನ್ನು ಸೆ. 25 ರಂದು ಬೆಳಿಗ್ಗೆ 10ಕ್ಕೆ ಬಾಗೇಪಲ್ಲಿ ತಾಲ್ಲೂಕಿನ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಆಸಕ್ತರು ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು. ಮೊದಲು ನೋಂದಾಯಿಸಿದ 50 ಅರ್ಜಿದಾರರಿಗೆ ತರಬೇತಿ ಸೀಮಿತಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಚಿಂತಾಮಣಿ, ಶಿಡ್ಲಘಟ್ಟ, ಗೌರಿಬಿದನೂರು 9740909438 ಮತ್ತು ಚಿಕ್ಕಬಳ್ಳಾಪುರ, ಬಾಗೇಪಲ್ಲಿ ಗುಡಿಬಂಡೆ 7676759249 ಗೆ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read