ರೈತರೇ ಗಮನಿಸಿ : ನಾಳೆಯಿಂದ ಜಾನುವಾರುಗಳ ಚರ್ಮಗಂಟು ರೋಗಕ್ಕೆ ಉಚಿತ ಲಸಿಕೆ

ಶಿವಮೊಗ್ಗ : ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮಗಳಲ್ಲಿರುವ ದನಗಳಿಗೆ ದಿನಾಂಕ: 20-06-2024 ರಿಂದ 20-07-2024 ರವರೆಗೆ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮೇಕೆ ಸಿಡುಬು ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಚರ್ಮ ಗಂಟು ರೋಗವು ಕ್ಯಾಪ್ರಿ ಫಾಕ್ಸ್ ವೈರಾಣುವಿನಿಂದ ಬರುವ ಸಾಂಕ್ರಾಮಿಕ ರೋಗವಾಗಿದ್ದು, ಮೇಕೆ ಸಿಡುಬು ಲಸಿಕೆಯಿಂದ ಇದನ್ನು ತಡೆಗಟ್ಟಬಹುದಾಗಿದೆ.

2023-24 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಈ ರೋಗೋದ್ರೇಕವು ಅತಿ ಹೆಚ್ಚಾಗಿ ಮಳೆಗಾಲ ಮುಕ್ತಾಯವಾದ ಕೂಡಲೇ ಕಂಡುಬಂದಿರುತ್ತದೆ. ಪ್ರಸ್ತುತ ಮಳೆಗಾಲ ಪ್ರಾರಂಭವಾಗುತ್ತಿದ್ದು, ಮಳೆಗಾಲದಲ್ಲಿ ಹೆಚ್ಚಾಗುವ ಸೊಳ್ಳೆ, ನೊಣ ಹಾಗೂ ಕೀಟಗಳ ಕಡಿತದಿಂದ ರೋಗವು ಜಾನುವಾರುವಿನಿಂದ ಜಾನುವಾರುವಿಗೆ ಹರಡುವುದರಿಂದ ಮುಂಜಾಗ್ರತಾ ಕ್ರಮವಾಗಿ ರೋಗದ ವಿರುದ್ಧ 2024-25 ನೇ ಸಾಲಿನಲ್ಲಿ ಜಿಲ್ಲೆಯಾದ್ಯಂತ ಎಲ್ಲ ಗ್ರಾಮಗಳಲ್ಲಿರುವ ದನಗಳಿಗೆ ಜೂನ್ 20 ರಿಂದ ಜುಲೈ 20 ರವರೆಗೆ ಮೇಕೆ ಸಿಡುಬು ಲಸಿಕೆ ಹಾಕಲಾಗುವುದು.

ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯನ್ನು ತಾಲ್ಲೂಕುವಾರು, ಗ್ರಾಮವಾರು ತಯಾರಿಸಲಾಗಿದ್ದು, ಪಶುಪಾಲನಾ ಇಲಾಖೆಯ ಅಧಿಕಾರಿ/ಸಿಬ್ಬಂದಿಯನ್ನೊಳಗೊಂಡ ಲಸಿಕಾ ತಂಡಗಳು ವೇಳಾಪಟ್ಟಿಯಂತೆ ಆಯಾ ಗ್ರಾಮಗಳಿಗೆ ಭೇಟಿ ನೀಡಿ ದನಗಳಿಗೆ ಉಚಿತವಾಗಿ ಲಸಿಕೆಯನ್ನು ಹಾಕಲಾಗುವುದು.ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ಚಿಕಿತ್ಸಾ ಸಂಸ್ಥೆಗಳನ್ನು ಸಂಪರ್ಕಿಸಬಹುದೆಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಡಾ.ಶಿವಯೋಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read