
ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ, ವಿಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗುತ್ತದೆ.ಬೆಳೆ ವಿಮೆ ನೋಂದಣಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ತಮ್ಮ ವ್ಯವಹಾರದ ಬ್ಯಾಂಕ್ಗಳಿಗೆ ಭೇಟಿ ನೀಡಬಹುದು ಹಾಗೂ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಪ್ಯೂಚರ್ ಜನರಲ್ ವಿಮಾ ಸಂಸ್ಥೆಯ ತಾಲೂಕು ಪ್ರತಿನಿಧಿಗೆ (ಮೊ.9743442928) ಗೆ ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

