HomeAgricultureರೈತರ ಗಮನಕ್ಕೆ : ರಸಗೊಬ್ಬರ, ಬಿತ್ತನೆ ಬೀಜ ವಿತರಣೆ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ರೈತರ ಗಮನಕ್ಕೆ : ರಸಗೊಬ್ಬರ, ಬಿತ್ತನೆ ಬೀಜ ವಿತರಣೆ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಮಡಿಕೇರಿ : ಪ್ರಸಕ್ತ (2024-25) ಸಾಲಿನ ಮುಂಗಾರು ಹಂಗಾಮಿನಲ್ಲಿ ಕೊಡಗು ಜಿಲ್ಲೆಯಲ್ಲಿ ಈವರೆಗೆ 465.7 ಮಿ.ಮಿ. ಮಳೆಯಾಗಿದ್ದು, ವಾಡಿಕೆಗಿಂತ ಶೇ.5.3 ರಷ್ಟು ಹೆಚ್ಚಾಗಿ ಮಳೆಯಾಗಿರುತ್ತದೆ. ರೈತರು ಮುಂಗಾರು ಹಂಗಾಮಿನ ಪೂರ್ವ ಸಿದ್ದತೆಯಲ್ಲಿದ್ದು, ಜಿಲ್ಲೆಯಲ್ಲಿ ಭತ್ತದ ಸಸಿ ಮಡಿ ಕಾರ್ಯವು ಜೂನ್ ಮಾಹೆಯಲ್ಲಿ ನಡೆಯಲಿದ್ದು, ಜುಲೈ ಮತ್ತು ಆಗಸ್ಟ್ ಮಾಹೆಗಳಲ್ಲಿ ನಾಟಿ ಕಾರ್ಯಕೈಗೊಳ್ಳಲಾಗುತ್ತದೆ. ಮುಸುಕಿನ ಜೋಳದ ಬಿತ್ತನೆ ಕಾರ್ಯವನ್ನು ಜೂನ್ ಮಾಹೆಯಲ್ಲಿ ಕೈಗೊಳ್ಳಲಾಗುತ್ತದೆ. ಆದ್ದರಿಂದ ರೈತರಿಗೆ ಅನುಕೂಲವಾಗುವಂತೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಇತರೆ ಕೃಷಿ ಪರಿಕರಗಳನ್ನು ಇಲಾಖೆಯ ರೈತ ಸಂಪರ್ಕ ಕೇಂದ್ರಗಳು, ಸಹಕಾರ ಸಂಘಗಳು ಮತ್ತು ಖಾಸಗಿ ಮಾರಾಟಗಾರರಲ್ಲಿ ದಾಸ್ತಾನೀಕರಿಸಲಾಗಿದೆ.

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಒಟ್ಟು 2171 ಕ್ವಿಂಟಾಲ್ ಭತ್ತ ಮತ್ತು 41 ಕ್ವಿಂಟಾಲ್ ಮುಸುಕಿನ ಜೋಳದ ಬಿತ್ತನೆ ಬೀಜಗಳನ್ನು ಸರಬರಾಜು ಮಾಡುವ ಗುರಿ ಹೊಂದಲಾಗಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಸ್ತುತ ದಿನಾಂಕದವರೆಗೆ ಒಟ್ಟು 1165.5 ಕ್ವಿಂಟಾಲ್ ಭತ್ತ ಹಾಗೂ 2.4 ಕ್ವಿಂಟಾಲ್ ಮುಸುಕಿನ ಜೋಳದ ವಿವಿಧ ತಳಿಯ ಬಿತ್ತನೆ ಬೀಜಗಳು ಸರಬರಾಜಾಗಿದ್ದು,ಇಲ್ಲಿಯವರೆಗೆ 575.5 ಕ್ವಿಂಟಾಲ್ ಭತ್ತದ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ಹಾಲಿ ರೈತ ಸಂಪರ್ಕ ಕೇಂದ್ರಗಳಲ್ಲಿ 592.4 ಕ್ವಿಂಟಾಲ್ ಬಿತ್ತನೆ ಬೀಜದ ದಾಸ್ತಾನು ಇರುತ್ತದೆ.

ಮುಂಗಾರು ಹಂಗಾಮಿನಲ್ಲಿ ಜಿಲ್ಲೆಗೆ ಒಟ್ಟು 80946 ಮೆ.ಟನ್ ವಿವಿಧ ಗ್ರೇಡ್ ಗಳ ರಸಗೊಬ್ಬರಗಳಿಗೆ ಬೇಡಿಕೆ ಇದ್ದು, ಜೂನ್ 2024ರ ಮಾಹೆಯ ಅಂತ್ಯದವರೆಗೆ 38812 ಮೆ.ಟನ್ ರಸಗೊಬ್ಬರ ಬೇಡಿಕೆ ಇರುತ್ತದೆ. ಲಭ್ಯವಿರುವ ದಾಸ್ತಾನಿನಲ್ಲಿ ವಿತರಣೆಯಾಗಿ ಒಟ್ಟು 38153 ಮೆ.ಟನ್ ರಸಗೊಬ್ಬರಗಳು ವಿವಿಧ ಸಹಕಾರ ಸಂಘ ಮತ್ತು ಖಾಸಗಿ ಸಂಸ್ಥೆಗಳಲ್ಲಿ ದಾಸ್ತಾನು ಇರುತ್ತದೆ. ಜಿಲ್ಲೆಯ ರೈತರ ಬೇಡಿಕೆ ಹಾಗೂ ಗುರಿಯನ್ವಯ ಹಂತ ಹಂತವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಪೂರೈಸಲಾಗುತ್ತಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular