ರೈತರೇ ಗಮನಿಸಿ : ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವೈಯಕ್ತಿಕ ಕೃಷಿ ಹೊಂಡ ನಿರ್ಮಾಣ, ಸಮುದಾಯ ಕೃಷಿಹೊಂಡ, ಪ್ಯಾಕ್ ಹೌಸ್ ನಿರ್ಮಾಣ, ಹಸಿರುಮನೆ ನೆರಳುಪರದೆ ನಿರ್ಮಾಣ, ಈರುಳ್ಳಿ ಶೇಖರಣಾ ಘಟಕ ನಿರ್ಮಾಣಕ್ಕಾಗಿ ಸೌಲಭ್ಯವನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ರೈತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಕು ತೋಟಗಾರಿಕೆ ಇಲಾಖೆಯಲ್ಲಿ ಫೆ. 26 ರೊಳಗಾಗಿ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಭದ್ರಾವತಿ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಅಥವಾ ಕಚೇರಿ ದೂ.ಸಂ.: 08282-295029 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read