HomeKarnatakaಹೋಂ-ಸ್ಟೇ ಮಾಲೀಕರ ಗಮನಕ್ಕೆ : ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಕಡ್ಡಾಯ

ಹೋಂ-ಸ್ಟೇ ಮಾಲೀಕರ ಗಮನಕ್ಕೆ : ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಕಡ್ಡಾಯ

ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿಯಾಗಿರುವುದಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದೆ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ ಹಾಗೂ ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿಗೊಳ್ಳದೆ ನಿಯಮಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದೆ.

ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ಪರವಾನಿಗೆ ಪಡೆದು ಕಾರ್ಯ ನಿರ್ವಹಿಸುತ್ತಿರುವ ಮತ್ತು ಪರವಾನಿಗೆ ಅವಧಿಯು 5 ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿರುವ ಹೋಂ-ಸ್ಟೇಗಳು ಪರವಾನಿಗೆಯನ್ನು ನವೀಕರಿಸುವಂತೆ ಈ ಮೂಲಕ ತಿಳಿಸಲಾಗಿದೆ.

ಹೋಂ-ಸ್ಟೇಗಳ ನೋಂದಣಿಗಾಗಿ ಪ್ರವಾಸೋದ್ಯಮ ಇಲಾಖೆಯು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅಂತರ್ಜಾಲ ತಾಣ http://karnatakatourism.org/ ಅಥವಾ https://kttf.karnatakatourism.org/ ಮುಖಾಂತರ ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಳ್ಳಲು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆನ್ಲೈನ್ನಲ್ಲಿ ಹೋಂ-ಸ್ಟೇ ನೋಂದಣಿ ಮಾಡಲು ಭಾವಚಿತ್ರ, ಆಧಾರ್ ಕಾರ್ಡ್, ಹೋಂ-ಸ್ಟೇ ಹೊರಾಂಗಣ, ಒಳಾಂಗಣ, ಸ್ನಾನಗೃಹ ಹಾಗೂ ಕೊಠಡಿ ಛಾಯಾಚಿತ್ರಗಳು. ಹೋಂ-ಸ್ಟೇ ಮಾಲೀಕತ್ವದ ದಾಖಲಾತಿ, ಪೊಲೀಸ್ ಇಲಾಖೆಯಿಂದ ನೀಡಲಾಗಿರುವ ನಿರಾಕ್ಷೇಪಣಾ ಪತ್ರ, ಸ್ಥಳೀಯ ಸಂಸ್ಥೆಯವರುಗಳು ನೀಡಿರುವ ನಿರಾಕ್ಷೇಪಣಾ ಪತ್ರ. ವಾಸಸ್ಥಳ ದೃಢೀಕರಣ ಪತ್ರ ಹಾಗೂ ನೋಂದಣಿ ಶುಲ್ಕ ರೂ.500 ಸ್ಕ್ಯಾನ್ ಮಾಡಿದ ದಾಖಲಾತಿಗಳನ್ನು ಅಂತರ್ಜಾಲ ತಾಣದಲ್ಲಿ ಅಪ್ಲೋಡ್ ಮಾಡಬೇಕಾಗಿರುತ್ತದೆ.

ಹೋಂ-ಸ್ಟೇ ಪರಿವೀಕ್ಷಣೆಗಾಗಿ ಅಧಿಕಾರಿಗಳು ಭೇಟಿ ನೀಡಿದಾಗ ಹೋಂ-ಸ್ಟೇ ಪ್ರಮಾಣಪತ್ರ ಅಥವಾ ಹೋಂ-ಸ್ಟೇ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿ ಹಾಜರುಪಡಿಸುವುದು. ಇಲ್ಲವಾದಲ್ಲಿ ಹೋಂ-ಸ್ಟೇ ಜಾಗದ ಮಾಲೀಕರ ಮೇಲೆ ಕ್ರಮ ಜರುಗಿಸಲಾಗುವುದು.

ಈಗಾಗಲೇ ಪರವಾನಿಗೆ ಪಡೆದು ಹೋಂ-ಸ್ಟೇ ನಡೆಸುತ್ತಿರುವ ಮಾಲೀಕರು ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಬರುವಂತಹ ಅತಿಥಿಗಳ ವಾಹನ ಸಂಖ್ಯೆ, ಗುರುತಿನ ಚೀಟಿಯ ವಿವರಗಳನ್ನು ನೋಂದಣಿ ಪುಸ್ತಕದಲ್ಲಿ ಕಡ್ಡಾಯವಾಗಿ ನಮೂದಿಸುವುದು. ಹೋಂ-ಸ್ಟೇಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹೀರ ಅನಧಿಕೃತ ಚಟುವಟಿಕೆಗಳನ್ನು ನಡೆಸಬಾರದು.

ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಬೆಂಕಿ ನಂದಕವನ್ನು ಕಡ್ಡಾಯವಾಗಿ ಹೋಂ-ಸ್ಟೇನಲ್ಲಿ ಅಳವಡಿಸುವುದು. ಹೋಂ-ಸ್ಟೇನಲ್ಲಿರುವ ಸಿ.ಸಿ ಟಿವಿಯ 45 ದಿನಗಳ ಪುಟೇಜ್ಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು ಹಾಗೂ ಸಿಸಿ ಟಿವಿಯನ್ನು ಸರಿಯಾಗಿ ನಿರ್ವಹಿಸುವುದು.

ಇವುಗಳಲ್ಲದೇ ಮಾಹಿತಿ ಇಲ್ಲದೆ ಅನಧೀಕೃತವಾಗಿ ನಡೆಸುತ್ತಿರುವಂತಹ ಹೋಂ-ಸ್ಟೇಗಳ ಬಗ್ಗೆ ಸಾರ್ವಜನಿಕರು ದೂರು/ ಮಾಹಿತಿ ಇದ್ದಲ್ಲಿ ಅವುಗಳ ವಿವರಗಳನ್ನು ಪತ್ರ ಮುಖೇನ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201 ದೂರವಾಣಿ ಸಂಖ್ಯೆ:08272-200519 ಅಥವಾ ಈ-ಮೇಲ್ : [email protected]ಗೆ ತಿಳಿಸಬಹುದು.

ಅದರಂತೆ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್, ಟೂರ್ಸ್ ಅಂಡ್ ಟ್ರಾವೆಲ್ ಏಜೆನ್ಸಿ ಹಾಗೂ ಮನರಂಜನಾ ಪಾರ್ಕ್ಗಳ ಉದ್ದಿಮೆದಾರರು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್ಸೈಟ್ http://kttf.karnatakatourism.org/ ಅಥವಾ http://www.karnatakatourism.org/ ನಲ್ಲಿ ತಮ್ಮ ಸಂಸ್ಥೆಯನ್ನು ನೋಂದಣಿ ಮಾಡಿಕೊಳ್ಳುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular