HomeKarnatakaJOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : 'KEA' ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ...

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ‘KEA’ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್) ಹಾಗೂ 14 ‘ಸಿ’ ಗ್ರೂಪ್ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಮಾ.10 ಕೊನೆಯ ದಿನಾಂಕವಾಗಿದೆ.

ಅರ್ಜಿ ಸಲ್ಲಿಕೆ ವಿಧಾನ

ಅರ್ಹ ಅಭ್ಯರ್ಥಿಗಳು ಕೆಇಎ ಅಧಿಕೃತ ಜಾಲತಾಣ http://kea.kar.nic.in ನಲ್ಲಿ ಆನ್ ಲೈನ್ ಮೂಲಕ ಸಲ್ಲಿಸಬೇಕಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶೈಕ್ಷಣಿಕ ವಿದ್ಯಾರ್ಹತೆ

ಸಹಾಯಕ ಇಂಜಿನಿಯರ್ ( ಸಿವಿಲ್)ಗೆ ಬಿಇ, ಬಿಟೆಕ್ ಇಂಜಿನಿಯರಿಂಗ್ ಪದವಿಯನ್ನು ಸಿವಿಲ್ ವಿಭಾಗದಲ್ಲಿ ಪಡೆದಿರಬೇಕು. ಆದರೆ ಅಂಚೆ ಮತ್ತು ದೂರು ಶಿಕ್ಷಣ ಮುಖಾಂತರ ಪಡೆದ ತಾಂತ್ರಿಕ ಪದವಿಗಳನ್ನು ನೇಮಕಾತಿಗೆ ಪರಿಗಣಿಸೋದಿಲ್ಲ.

ಅರ್ಜಿ ಶುಲ್ಕ

ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳಾದಂತ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ.750.ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ-1, ಮಾಜಿ ಸೈನಿಕರು ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ ರೂ.500 ಶುಲ್ಕ ವಿಧಿಸಲಾಗಿದೆ.

ಆಯ್ಕೆ ವಿಧಾನ

ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಪ್ ಲೈನ್ ಒಎಂ ಆರ್ ಮಾದರಿ ಮೂಲಕ ಪರೀಕ್ಷೆ ನಡೆಸಲಾಗುತ್ತದೆ. ಈ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದಂತ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 10-02-2024ರಿಂದ ಪ್ರಾರಂಭವಾಗಲಿದ್ದು, ಅರ್ಜಿ ಸಲ್ಲಿಸಲು 10-03-2024 ಕೊನೆಯ ದಿನವಾಗಿದೆ. ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ 14-03-2024 ಆಗಿರುತ್ತದೆ.

ವಯೋಮಿತಿ

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38, ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular