HomeKarnatakaJOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಜೂ.14 ರಂದು ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಜೂ.14 ರಂದು ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ

ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ಪ್ರದೇಶದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜೂ.14 ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಹೊಂಡಾ ಮೋಟಾರ್ ಸೈಕಲ್ ಕಂಪನಿಯಲ್ಲಿ ಅಪ್ರೆಂಟೀಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೆ.ಹೆಚ್.ಎಂ.ಪಂಡಿತಾರಾಧ್ಯ ಅವರು ತಿಳಿಸಿದ್ದಾರೆ.

ಸಂದರ್ಶನದಲ್ಲಿ ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಇ.ಎಂ, ಎಂ.ಎಂ.ವಿ, ಮೆಕ್ಯಾನಿಕ್ ಡೀಸಲ್ ವೃತ್ತಿಗಳ ಐ.ಟಿ.ಐ ಪಾಸಾದ ಅಭ್ಯರ್ಥಿಗಳು ಹಾಗೂ ಅಂತಿಮ ವರ್ಷದ ತರಬೇತಿದಾರರು ಭಾಗವಹಿಸಬಹುದು.

*ದಾಖಲೆಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂದರ್ಶನದಲ್ಲಿ ಭಾಗವಹಿಸುವವರು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಎರಡು ಭಾವಚಿತ್ರಗಳು, ಆಧಾರ್ ಕಾರ್ಡ್ನ ಪ್ರತಿ ಹಾಗೂ ಸ್ವ-ವಿವರವುಳ್ಳ ಬಯೋಡೇಟಾ ಮತ್ತು ತಪ್ಪದೇ ಸ್ಮಾರ್ಟ್ ಮೊಬೈಲ್ನ್ನು ತರಬೇಕು. 18 ವರ್ಷ ಮೇಲ್ಪಟ್ಟವರು ಅರ್ಹರಾಗಿರುತ್ತಾರೆ.

ಜೂ.14 ರಂದು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಯಲಿದೆ. ಅರ್ಹರು ಕ್ಯಾಂಪಸ್ ಸಂದರ್ಶನಕ್ಕೆ ಹಾಜರಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular