
ಈ ಮೇಳದಲ್ಲಿ ಉದ್ದಿಮೆದಾರರು ಮತ್ತು ಬೆಂಗಳೂರಿನ ಪ್ರತಿಷ್ಠಿತ ಎಂಎನ್ಸಿ ಕಂಪನಿಗಳು ಭಾಗವಹಿಸಲಿವೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಪ್ರಾಚಾರ್ಯರು ತಮ್ಮ ಸಿಬ್ಬಂದಿಗಳೊಂದಿಗೆ ಆಗಮಿಸಬೇಕು ಎಂದು ಅವರು ತಿಳಿಸಿದ್ದಾರೆ.
ಶಿಶಿಕ್ಷು ತರಬೇತಿ ನೊಂದಣಿಗಾಗಿ ಐಟಿಐ ಉತ್ತೀರ್ಣರಾದ ಮತ್ತು ಫಲಿತಾಂಶ ನಿರೀಕ್ಷೆಯಲ್ಲಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲಕ ದಾಖಲಾತಿಗಳೊಂದಿಗೆ ಹಾಜರಾಗಬಹುದು ಎಂದು ದೇವೆಂದ್ರಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

