HomeKarnatakaJOB FAIR : ಉದ್ಯೋಗಾಂಕ್ಷಿಗಳ ಗಮನಕ್ಕೆ : ಸೆ.6 ರಂದು ನೇರ ಬಳ್ಳಾರಿಯಲ್ಲಿ ನೇರ ಸಂದರ್ಶನ

JOB FAIR : ಉದ್ಯೋಗಾಂಕ್ಷಿಗಳ ಗಮನಕ್ಕೆ : ಸೆ.6 ರಂದು ನೇರ ಬಳ್ಳಾರಿಯಲ್ಲಿ ನೇರ ಸಂದರ್ಶನ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆ.6 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.

ನೇರ ಸಂದರ್ಶನವು ನಗರದ ಸಿರುಗುಪ್ಪ ರಸ್ತೆಯ ಹವಂಭಾವಿ ಬಳಿಯ ಬ್ರಿಲಿಯಂಟ್ ಪಬ್ಲಿಕ್ ಶಾಲೆಯ ಎದುರು ಮಾಸ್ಸೆ ಫರ್ಗುಸನ್ ಟ್ರಾಕ್ಟರ್ ಗಳು , ಹೊಸ ಟ್ರ್ಯಾಕ್ಟರ್ ಶೋರೂಂ, ಟಫೆ ಮಾಸ್ಸೆ ಫರ್ಗುಸನ್, ಬಳ್ಳಾರಿ ಇಲ್ಲಿ ನಡೆಯಲಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.

ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.ಬೇಕಾದ ದಾಖಲೆ: ಆಧಾರ್ ಕಾರ್ಡ್, ಸ್ವ ವಿವರಗಳೊಂದಿಗೆ ಹಾಜರಾಗಬೇಕು. ಆಸಕ್ತ ಆಭ್ಯರ್ಥಿಗಳು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular