
ಸುಮಾರು 03 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು. ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಮೂಲ ಆಧಾರ್ಕಾರ್ಡ್ ಪ್ರತಿ ಮತ್ತು ಸ್ವ-ವಿವರ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
ವಿದ್ಯಾರ್ಹತೆ : ಪಿಯುಸಿ, ಐಟಿಐ, ಪದವೀಧರರ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ ಅಥವಾ ಮೊ.8073365184, 9019692898 ಹಾಗೂ 7892971984 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

