HomeKarnatakaJOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ ; ನಾಳೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ ; ನಾಳೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಡಿಕೇರಿ :   ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ, 08 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿರಾಜಪೇಟೆ ಕಲ್ಯಾಣಿ ಮೋಟಾರ್ಸ್, ನೆಕ್ಸಾ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಈ ನೇರ ಸಂದರ್ಶನದಲ್ಲಿ ಕಲ್ಯಾಣಿ ಮೋಟಾರ್ಸ್, ನೆಕ್ಸಾ, ವಿರಾಜಪೇಟೆ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ನೇರ ಸಂದರ್ಶನದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೇರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಅವರು ಹೇಳಿದ್ದಾರೆ.

ಅರ್ಜಿ ಆಹ್ವಾನ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಡಿಕೇರಿ 2026-27ನೇ ಶೈಕ್ಷಣಿಕ ವರ್ಷಕ್ಕೆ ಕೊಡಗು ಜಿಲ್ಲೆಯ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ 11 ನೇ ತರಗತಿ (ವಿಜ್ಞಾನ ಹಾಗೂ ವಾಣಿಜ್ಯ ವಿಭಾಗ) ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2025-26ನೇ ಶೈಕ್ಷಣಿಕ ವರ್ಷದಲ್ಲಿ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ಮಾನ್ಯತೆ ಪಡೆದ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ / 10ನೇ ತರಗತಿಯನ್ನು ಉತ್ತೀರ್ಣರಾಗಿದ್ದು, ಒಟ್ಟು ಕನಿಷ್ಠ ಶೇ.50 ಅಂಕಗಳು ಹಾಗೂ ಗಣಿತ ವಿಷಯದಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಅರ್ಜಿ ಸಲ್ಲಿಸಲು ಜುಲೈ, 10 ಕೊನೆಯ ದಿನವಾಗಿದೆ. ಸರ್ಕಾರದ ನಿಯಮಾನುಸಾರ ಮೀಸಲಾತಿ ಸೌಲಭ್ಯಗಳು ಅನ್ವಯವಾಗುತ್ತವೆ. ಹೆಚ್ಚಿನ ಮಾಹಿತಿಗೆ ದೂ.ಸಂ.9380802179, 9448215623 ರಲ್ಲಿ ಜವಾಹರ ನವೋದಯ ವಿದ್ಯಾಲಯವನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular