HomeKarnatakaಉದ್ಯೋಗಾಂಕ್ಷಿಗಳೇ ಗಮನಿಸಿ : ಚಿತ್ರದುರ್ಗದಲ್ಲಿ ನಾಳೆ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಸಂದರ್ಶನ

ಉದ್ಯೋಗಾಂಕ್ಷಿಗಳೇ ಗಮನಿಸಿ : ಚಿತ್ರದುರ್ಗದಲ್ಲಿ ನಾಳೆ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಸಂದರ್ಶನ

ಚಿತ್ರದುರ್ಗ : ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಡಿ.13ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.

ಸಂದರ್ಶನದಲ್ಲಿ ಮೂರಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೊಮಾ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು 5 ಬಯೋಡಾಟಾ ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಫೋಟೊಗಳೊಂದಿಗೆ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060, 9964528212, 7019755147 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular