JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಜು. 27 ರಂದು ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ : ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 27 ರಂದು ಬೆಳಗ್ಗೆ 10.30 ಕ್ಕೆ ನಗರದ ಕೋರ್ಟ್ ರೋಡ್ ಶ್ರೀ ದೇವರಾಜ್ ಟರ್ಸ್ ಬಳಿಯ ಪೈ ಇಂಟರ್ ನ್ಯಾಷ್ನಲ್ ನಲ್ಲಿ ನೇರ ಸಂದರ್ಶನ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಕಾಂ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಮೊ.ಸಂಖ್ಯೆ: 8105618291, 9945856670, 9901472710 ಹಾಗೂ 8105774936 ಅನ್ನುಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

ಮಡಿಕೇರಿ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶನಾಲಯದಲ್ಲಿ ‘ಕಲ್ಯಾಣ ಸಂಘಟಕರು ‘ಸಿ’ ವೃಂದದ ಒಟ್ಟು 14 ಹುದ್ದೆಗಳಿಗೆ ಅರ್ಹ ಮಾಜಿ ಸೈನಿಕರಿಂದ (ಜೆಸಿಒ ಹಾಗೂ ತತ್ಸಮಾನ ರ್ಯಾಂಕ್) ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರಿ ಮುದ್ರಣಾಲಯಗಳಲ್ಲಿ ಲಭ್ಯವಿರುವ ಸರ್ಕಾರದಿಂದ ನಿಗಧಿಪಡಿಸಿದ ಅರ್ಜಿ ನಮೂನೆ 1 ನ್ನು ಭರ್ತಿ ಮಾಡಿ, ದ್ವಿಪ್ರತಿಯಲ್ಲಿ ಆಗಸ್ಟ್, 05 ರೊಳಗೆ ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭವನ, ಬೆಂಗಳೂರು-560025 ಇವರಿಗೆ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯಂ ಅವರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read