
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಕಾಂ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಮೊ.ಸಂಖ್ಯೆ: 8105618291, 9945856670, 9901472710 ಹಾಗೂ 8105774936 ಅನ್ನುಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ
ಮಡಿಕೇರಿ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶನಾಲಯದಲ್ಲಿ ‘ಕಲ್ಯಾಣ ಸಂಘಟಕರು ‘ಸಿ’ ವೃಂದದ ಒಟ್ಟು 14 ಹುದ್ದೆಗಳಿಗೆ ಅರ್ಹ ಮಾಜಿ ಸೈನಿಕರಿಂದ (ಜೆಸಿಒ ಹಾಗೂ ತತ್ಸಮಾನ ರ್ಯಾಂಕ್) ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರಿ ಮುದ್ರಣಾಲಯಗಳಲ್ಲಿ ಲಭ್ಯವಿರುವ ಸರ್ಕಾರದಿಂದ ನಿಗಧಿಪಡಿಸಿದ ಅರ್ಜಿ ನಮೂನೆ 1 ನ್ನು ಭರ್ತಿ ಮಾಡಿ, ದ್ವಿಪ್ರತಿಯಲ್ಲಿ ಆಗಸ್ಟ್, 05 ರೊಳಗೆ ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭವನ, ಬೆಂಗಳೂರು-560025 ಇವರಿಗೆ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯಂ ಅವರು ತಿಳಿಸಿದ್ದಾರೆ.

