HomeKarnatakaJOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : 'ಗೃಹರಕ್ಷಕ ದಳ' ಹುದ್ದೆಗೆ ಅರ್ಜಿ ಸಲ್ಲಿಸಲು ಇಂದೇ...

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ‘ಗೃಹರಕ್ಷಕ ದಳ’ ಹುದ್ದೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜನವರಿ 5 ಇಂದು ಕೊನೆಯ ದಿನವಾಗಿದೆ.

ಎಸ್ ಎಸ್ ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಅರ್ಜಿ ನಮೂನೆಗಳನ್ನು ಸಮಾದೇಷ್ಟರವರ ಕಚೇರಿ, ಗೃಹರಕ್ಷಕ ದಳ, ಬೆಂಗಳೂರು ಉತ್ತರ ಜಿಲ್ಲೆ, ವೆಸ್ಟ್ ಆಫ್ ಕಾರ್ಡ್ ರಸ್ತೆ, ಅಗ್ನಿಶಾಮಕ ಠಾಣೆ ಪಕ್ಕ, ರಾಜಾಜಿನಗರ, ಬೆಂಗಳೂರು-560010 ಇಲ್ಲಿಗೆ ಕಳುಹಿಸಿಕೊಡಬೇಕು. ಅರ್ಜಿಗಳನ್ನು ಜನವರಿ 5ರವರೆಗೆ ಮಧ್ಯಾಹ್ನ 2.30ರಿಂದ 5ಗಂಟೆವರೆಗೆ ಉಚಿತವಾಗಿ ವಿತರಿಸಲಾಗುವುದು.

ಕಂಪ್ಯೂಟರ್ ಟೈಪಿಂಗ್ (ಕನ್ನಡ & ಇಂಗ್ಲೀಷ್) ಹಾಗೂ ಅಡುಗೆ ಭಟ್ಟರು, ಕಾರ್ಪೆಂಟರ್, ಎಲೆಕ್ಟ್ರೀಷಿಯನ್, ಪೈಂಟರ್ & ಪ್ಲಂಬರ್ ಇತ್ಯಾದಿ ಕೌಶಲ್ಯಗಳ ತರಬೇತಿ ಹೊಂದಿರುವವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾದೇಷ್ಟರವರ ಕಚೇರಿ, ಗೃಹರಕ್ಷಕ ದಳ, ಬೆಂಗಳೂರು ಉತ್ತರ ಜಿಲ್ಲೆ, ವೆಸ್ಟ್ ಆಫ್ ಕಾರ್ಡ್ ರೋಡ್, ರಾಜಾಜಿನಗರ, ಬೆಂಗಳೂರು-560010 ಅಥವಾ ದೂರವಾಣಿ ಸಂಖ್ಯೆ 080-23142542ಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular