HomeAutoವಾಹನ ಸವಾರರ ಗಮನಕ್ಕೆ : 'HSRP’ ನಂಬರ್ ಪ್ಲೇಟ್ ಅಳವಡಿಸಲು 3 ತಿಂಗಳು ಅವಧಿ ವಿಸ್ತರಣೆ

ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಸಲು 3 ತಿಂಗಳು ಅವಧಿ ವಿಸ್ತರಣೆ

ಬೆಂಗಳೂರು : ವಾಹನಗಳಿಗೆ ‘ HSRP’ ನಂಬರ್ ಪ್ಲೇಟ್ ಅಳವಡಿಸಲು ಮತ್ತೆ ಮೂರು ತಿಂಗಳು ಅವಧಿ ವಿಸ್ತರಣೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಈ ಬಗ್ಗೆ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ವಾಹನಗಳಿಗೆ ಅತಿ ಸುರಕ್ಷತಾ ನೋಂದಣಿ ಫಲಕ ಅಳವಡಿಸಲು ನಿಗದಿ ಮಾಡಿದ್ದ ಗಡುವನ್ನು ಮತ್ತೆ ಮೂರು ತಿಂಗಳು ವಿಸ್ತರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್ಎಸ್ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅವಳಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಫೆಬ್ರವರಿ 17ರೊಳಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular