HomeLatest NewsBIG NEWS : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಯಲ್ಲಿ ಇಂದಿನಿಂದ 3...

BIG NEWS : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಯಲ್ಲಿ ಇಂದಿನಿಂದ 3 ತಿಂಗಳು ಸಂಚಾರ ನಿಷೇಧ.!

ಬೆಂಗಳೂರು : ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೆನ್ನಿಗಾನಹಳ್ಳಿಯಿಂದ-ಕಸ್ತೂರಿನಗರ ಕಡೆ ಹೋಗುವ ರೈಲ್ವೇ ಪ್ಯಾರಲಲ್ ರಸ್ತೆಯಲ್ಲಿ ರೈಲ್ವೇ ಇಲಾಖೆ ವತಿಯಿಂದ ಬ್ರಿಡ್ಜ್ ನಿರ್ಮಾಣ ಕಾಮಗಾರಿ ಕೈಗೊಳ್ಳುವ ಸಂಬಂಧ ದಿನಾಂಕ: 14.06.2025 ರಿಂದ 90 ದಿನಗಳ ಕಾಲ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ.

ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ

ಬೆನ್ನಿಗಾನಹಳ್ಳಿ (ಸದಾನಂದನಗರ ಬ್ರಿಡ್ಜ್) ಕಡೆಯಿಂದ ಹಳೆ ಮದ್ರಾಸ್ ರಸ್ತೆಗೆ ಸೇರುವ ಕೋಕೊ ಕೋಲಾ ಗೋಡಾನ್ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.
ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗ :
ಹಳೆ ಮದ್ರಾಸ್ ರಸ್ತೆ ಬೆನ್ನಿಗಾನಹಳ್ಳಿ ರೈಲ್ವೆ ಬ್ರಿಡ್ಜ್ ಕಡೆಯಿಂದ ಕಸ್ತೂರಿನಗರ ಕಡೆಗೆ ಹೋಗುವ ವಾಹನ ಸವಾರರು ಬೈಪಾಸ್ ಹೆಬ್ಬಾಳ ১০ ಸಂಚರಿಸಬಹುದಾಗಿರುತ್ತದೆ. ರಸ್ತೆಯ ಮೂಲಕ ಕಸ್ತೂರಿನಗರ ಕಡೆಗೆ
ಕಸ್ತೂರಿನಗರ ಕಡೆಯಿಂದ ಹಳೆ ಮದ್ರಾಸ್ ರಸ್ತೆ ಕಡೆಗೆ ಹೋಗುವ ವಾಹನ ಸವಾರರು ಸದಾನಂದನಗರ ಕಡೆಯಿಂದ ಎನ್.ಜಿ.ಇ.ಎಫ್ ಸಿಗ್ನಲ್ ಮೂಲಕ ಹಳೆ ಮದ್ರಾಸ್ ರಸ್ತೆ ಕಡೆಗೆ ಸಂಚರಿಸಬಹುದಾಗಿರುತ್ತದೆ. ಸಾರ್ವಜನಿಕರು ಸಹಕರಿಸಲು ಕೋರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular