ಬೆಂಗಳೂರು : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಇಂದಿನಿಂದ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಈ ಕುರಿತು ನಗರ ಟ್ರಾಫಿಕ್ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.
ಹೆಚ್.ಎ.ಎಲ್ ಏರ್ಪೋರ್ಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ತಿಕ್ ನಗರ ಜಂಕ್ಷನ್ನಿಂದ ಕಲಾಮಂದಿರವರೆಗೆ ಹೊರವರ್ತುಲ ರಸ್ತೆಯಲ್ಲಿನ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಂಬಂಧ ದಿನಾಂಕ: 28.07.2025 ರಿಂದ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ.
ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ :
- ಜೀವಿಕ ಆಸ್ಪತ್ರೆ ಮಾರತ್ತಹಳ್ಳಿ ಕಡೆಯ ಸರ್ವಿಸ್ ರಸ್ತೆಯಲ್ಲಿ ಕಲಾಮಂದಿರ ಕಡೆಯಿಂದ ಹೊರವರ್ತುಲ ರಸ್ತೆಗೆ ಪ್ರವೇಶಿಸುವ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.
- ಯಮಹಾ ಶೋ ರೂಂ ಬಳಿ ಹೊರವರ್ತುಲ ರಸ್ತೆಯಿಂದ ಸರ್ವಿಸ್ ರಸ್ತೆಗೆ ಪ್ರವೇಶಿಸುವ ಮಾರ್ಗವನ್ನು ನಿರ್ಬಂಧಿಸಲಾಗಿರುತ್ತದೆ.
ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗ : - ಚಿನ್ನಪ್ಪನಹಳ್ಳಿ ರೈಲ್ವೆ ಗೇಟ್ ಕಡೆಯಿಂದ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಸಂಚರಿಸುವ ವಾಹನಗಳು ಜೀವಿಕಾ ಆಸ್ಪತ್ರೆಯ ಸರ್ವೀಸ್ ರಸ್ತೆಯ ಮೂಲಕ ಸಂಚರಿಸಿ ಕಡ್ಡಾಯವಾಗಿ ಯಮಹಾ ಶೋ ರೂಂ ಬಳಿ ಹೊರವರ್ತುಲ ರಸ್ತೆಗೆ ಪ್ರವೇಶಿಸಿ ಸಂಚರಿಸುವುದು.
- ಮಹದೇವಪುರ ಮತ್ತು ಕಾರ್ತಿಕ್ನಗರ ಹೊರವರ್ತುಲ ರಸ್ತೆ ಕಡೆಯಿಂದ ವೈಟ್ ಫೀಲ್ಡ್ / ವರ್ತೂರು ಕಡೆಗೆ ಸಂಚರಿಸುವ ವಾಹನಗಳು ಕಳಾಮಂದಿರ ಜಂಕ್ಷನ್ನಲ್ಲಿ ಸರ್ವಿಸ್ ರಸ್ತೆಯನ್ನು ಪ್ರವೇಶಿಸಿ ಕುಂದಲಹಳ್ಳಿ / ವರ್ತೂರು ಕಡೆಗೆ ಸಂಚರಿಸಬಹುದಾಗಿದೆ.
#ಸಂಚಾರಸಲಹೆ#TrafficAdvisory @DgpKarnataka @KarnatakaCops @CPBlr @Jointcptraffic @BlrCityPolice @blrcitytraffic @acpwfieldtrf @acpeasttraffic @mahadevapuratrf @halairporttrfps @KRPURATRAFFIC @wftrps @bwaditrafficps @ftowntrfps @jbnagartrfps @halasoortrfps @kghallitrfps… pic.twitter.com/XsgFHGudOw
— DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ (@DCPTrEastBCP) July 27, 2025
You Might Also Like
TAGGED:ಸಂಚಾರ ನಿರ್ಬಂಧ