ಬೆಂಗಳೂರು : ಬೆಂಗಳೂರಿನ ವಾಹನ ಸವಾರರೇ ಗಮನಿಸಿ , ಜುಲೈ 2 ರವರೆಗೆ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ ಎಂದು ಸಂಚಾರಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.
ಕದಿರೇನಹಳ್ಳಿ ಅಂಡರ್ ಪಾಸ್ ಬಳಿ ಸರ್ವಿಸ್ ರಸ್ತೆಯಲ್ಲಿ BWSSB ಕಾಮಗಾರಿ ನಡೆಯುತ್ತಿರುವುದರಿಂದ ಸರ್ವೀಸ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿದೆ, ಪರ್ಯಾಯ ಮಾರ್ಗವಾಗಿ ಡಾ. ಪುನೀತ್ ರಾಜಕುಮಾರ್ ರಿಂಗ್ ರಸ್ತೆಯ ಮೂಲಕ ಸಾರಕ್ಕಿ ಜಂಕ್ಷನ್ ಗೆ ಸಾಗಿ ಎಡತಿರುವು ಪಡೆದು ಕನಕಪುರ ರಸ್ತೆಯ ಮೂಲಕ ಸಾಗಬಹುದು ಎಂದು ಸಂಚಾರಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.

