
ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ಗೆ ಇಂದು 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆಯಿದ್ದು, ಬೆಂಗಳೂರಿನ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ ನಿಷೇಧಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ನಾಡಿನೆಲ್ಲೆಡೆ ಇಂದು ಕ್ರಿಸ್ ಮಸ್ ಸಂಭ್ರಮ ಮನೆ ಮಾಡಿದ್ದು, ನಿನ್ನೆ ರಾತ್ರಿಯಿಂದಲೇ ಕ್ರೈಸ್ತ ಬಾಂಧವರು ಚರ್ಚ ಗಳಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ನಗರದ ಹಲವು ಚರ್ಚೆಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

