HomeKarnatakaರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಪ್ರಸ್ತಕ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ (ರಾಜ್ಯ ವಿದ್ಯಾರ್ಥಿ ನಿಲಯಗಳ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ ಹೊರಡಿಸಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಸ್ಯಾಟ್ಸ್ ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ ವಿಳಾಸ https://shp.karnataka.gov.in/ ಇಲ್ಲಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಥಿನಿಲಯಕ್ಕೆ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನು ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ ವೆಬ್ಸೈಟ್ https://shp.karnataka.gov.in/ ಅಲ್ಲಿ ನೋಡಬಹುದು. ವಿದ್ಯಾರ್ಥಿಗಳು 2024-25ನೇ ಸಾಲಿನಲ್ಲಿ ಬೇರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ ವಿದ್ಯಾರ್ಥಿಗಳ ಸ್ಯಾಟ್ಸ್ ಐಡಿಯನ್ನು ಪ್ರಸಕ್ತ ಶಾಲೆಯಲ್ಲಿ ಸಂಬಂಧಿಸಿದ ಮಾಹಿತಿಯನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.07.2024

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://bcwd.karnataka.gov.in/ ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular