‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ಈ ಮಾರ್ಗದಲ್ಲಿ 2 ದಿನ ರೈಲು ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು : ನಮ್ಮ ಮೆಟ್ರೋದ ಈ ಮಾರ್ಗದಲ್ಲಿ ಎರಡು ದಿನ ಸಂಚಾರ ಬಂದ್ ಇರಲಿದೆ ಎಂದು ಬಿಎಂಆರ್ ಸಿ ಎಲ್ ಪ್ರಕಟಣೆ ಹೊರಡಿಸಿದೆ.

ನಮ್ಮ ಮೆಟ್ರೋದ ಹಸಿರು ಮಾರ್ಗದ ನಾಗಸಂದ್ರ-ರೇಷ್ಮೆ ಸಂಸ್ಥೆ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಿದೆ. ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಹೀಗಾಗಿ ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.

ಹಾಗೂ ಸೆಪ್ಟೆಂಬರ್ 6 ಮತ್ತು 11ರಂದು ನಮ್ಮ ಮೆಟ್ರೋ ರೈಲು ಸಂಚಾರ ಪೂರ್ಣ ದಿನ ಸ್ಥಗಿತವಾಗಲಿದೆ. ನೇರಳೆ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ರೈಲುಗಳ ಸಂಚಾರ ಇರಲಿದೆ ಎಂದು ಬಿಎಂಆರ್ಸಿಎಲ್ ಪ್ರಕಟಣೆ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read