ಬೆಂಗಳೂರು: ಇಂದು ಕೂಡ ಬೆಂಗಳೂರಿನ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗುತ್ತಿದೆ.
ಪೀಣ್ಯ ಇಂಡಸ್ಟ್ರಿಯಿಂದ ನಾಗಸಂದ್ರ ನಿಲ್ದಾಣದವರೆಗಿನ ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಪೀಣ್ಯ ಮೇಲ್ಸೇತುವೆ ಶುಕ್ರವಾರ ಬೆಳಗ್ಗೆ 6ರಿಂದ ಶನಿವಾರ ಬೆಳಗ್ಗೆ 6ರವರೆಗೆ ಹೆಚ್ಎಂವಿಗಳಿಗೆ ಬಂದ್ ಆಗಲಿದೆ.
ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆಯನ್ನು ಮುಂದುವರಿಸಲು ಕೆಲವು ದಿನಗಳೆಂದು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ.
ಬೆಂಗಳೂರು ನಮ್ಮ ಮೆಟ್ರೋ ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ.ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆಯನ್ನು ಮುಂದುವರಿಸಲು ಕೆಲವು ದಿನಗಳೆಂದು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ.ದಿನಾಂಕ 23, 30ನೇ ಆಗಸ್ಟ್ 2024 ಹಾಗೂ 6 ಮತ್ತು 11ನೇ ಸೆಪ್ಟೆಂಬರ್ 2024 ರಂದು ಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ.
Curtailment of Metro Services on the Green Line due to Signalling Tests on the days mentioned in the Media Release. Public make note the change and plan their commute. pic.twitter.com/ygHwXF8PaH
— ನಮ್ಮ ಮೆಟ್ರೋ (@OfficialBMRCL) August 19, 2024

