HomeLatest Newsಮುಕ್ತ ವಿವಿ ವಿದ್ಯಾರ್ಥಿಗಳ ಗಮನಕ್ಕೆ ; UG/PG ಪರೀಕ್ಷಾ ಶುಲ್ಕ ಪಾವತಿಗೆ ದಿನಾಂಕ ಪ್ರಕಟ

ಮುಕ್ತ ವಿವಿ ವಿದ್ಯಾರ್ಥಿಗಳ ಗಮನಕ್ಕೆ ; UG/PG ಪರೀಕ್ಷಾ ಶುಲ್ಕ ಪಾವತಿಗೆ ದಿನಾಂಕ ಪ್ರಕಟ

ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2001-02 ರಿಂದ 2014-15 ನೇ ಶೈಕ್ಷಣಿಕ ಸಾಲುಗಳಲ್ಲಿ ಯುಜಿ/ಪಿ.ಜಿ ಕೋರ್ಸ್ಗಳಾದ ಬಿ.ಎ, ಬಿ.ಕಾಂ, ಬಿ.ಲಿಬ್ ಐ.ಎಸ್ಸಿ, ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಎಸ್ಸಿ, ಎಲ್ ಎಲ್ ಎಂ, ಎಂಲಿಬ್ ಐ.ಎಸ್ಸಿ ಮತ್ತು ಬಿ.ಎಡ್, ಬಿ.ಎಡ್, ಎಂ.ಎಡ್ ಗಳಿಗೆ ಪ್ರವೇಶ ಪಡೆದ ಪರೀಕ್ಷೇಗಳನ್ನು ತೆಗೆದುಕೊಂಡಿರದ/ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ವಿವಿಯು ಪರೀಕ್ಷಾ ಶುಲ್ಕವನ್ನು ಪಾವತಿಸಲು ಅವಕಾಶವನ್ನು ಕಲ್ಪಿಸಿದೆ.

ಪರೀಕ್ಷಾ ಶುಲ್ಕವನ್ನು ಪಾವತಿಸಲು ದಂಡ ಶುಲ್ಕವಿಲ್ಲದೆ ಮಾರ್ಚ್ 30 ಹಾಗೂ ಏಪ್ರಿಲ್ 6 ರಂದು ದಂಡ ಶುಲ್ಕದೊಡನೆ ರೂ.200 ಪಾವತಿಸಲು ಕೊನೆಯ ದಿನ. ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ www.ksoumysuru.ac.in ಮೂಲಕ ಪರೀಕ್ಷಾ ಶುಲ್ಕವನ್ನು ಪಾವತಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-1, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ ಸ್ಯಾಟಿಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ದೂರವಾಣಿ: 080-26603664 ಅಥವಾ 9880526439/9019526439 ಮೂಲಕ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular